ಬಿದಿರಿನ ಒಳಗೆ ಗಾಂಜಾವನ್ನು ತುಂಬಿಸಿ ಸಾಗಾಟ ➤ ಇಬ್ಬರು ಆರೋಪಿಗಳ ಸೆರೆ

(ನ್ಯೂಸ್ ಕಡಬ) newskadaba.com ಉಡುಪಿ . ಆ,23: ಕಂಟೈನರ್ ಲಾರಿಯಲ್ಲಿ ಉತ್ತರಪ್ರದೇಶದಿಂದ ಮಂಗಳೂರಿಗೆ ಬಿದಿರು ತುಂಬಿಸಿಕೊಂಡು ಅದರೊಳಗೆ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 49 ಕೆಜಿ ಗಾಂಜಾವನ್ನು ಉಡುಪಿ ಡಿಸಿಐಬಿ ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

 

 

ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದ ಕ್ರಾಸ್ ಸಮೀಪ ಶನಿವಾರ ಗಾಂಜಾ ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ ನಡೆಸಿದ ಪೊಲೀಸರು 49 ಕೆ.ಜಿ 150 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಕುರತಪಾಂಡಿ ಹಾಗೂ ವಾನುವಲ್ ದಾರ್ ಎಂಬುವರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶ ನೋಂದಣಿಯ ಲಾರಿಯಲ್ಲಿ ಗಾಂಜಾವನ್ನು ಸಾಗಿಸಲಾಗುತ್ತಿತ್ತು.ವಶಪಡಿಸಿಕೊಂಡ ಗಾಂಜಾ ಮೌಲ್ಯ 14.75 ಎಂದು ಅಂದಾಜಿಸಲಾಗಿದೆ. ಲಾರಿ ಹಾಗೂ 2 ಮೊಬೈಲ್‌ಗಳನ್ನು ವಶಕ್ಕೆ ಪಡೆದು ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Also Read  ಗಣೇಶ ವಿಸರ್ಜನೆ ವೇಳೆ ಅವಘಢ ► ಇಬ್ಬರು ಬಲಿ

 

error: Content is protected !!
Scroll to Top