7 ಬಾರಿ ಪೆಟ್ರೋಲ್ ದರ ಏರಿಸಿದ ಕೇಂದ್ರ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,23:  ಜೂನ್ ಮತ್ತು ಜುಲೈ ತಿಂಗಳಲ್ಲಿ ನಿರಂತರವಾಗಿ ಇಂಧನ ಬೆಲೆ ಏರಿಸಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಗ ಮತ್ತೆ ದರ ಏರಿಕೆಯನ್ನು ಮುಂದುವರೆಸಿದೆ. ಕಳೆದ ಎಂಟು ದಿನಗಳಲ್ಲಿ ಏಳು ಬಾರಿ ಪೆಟ್ರೋಲ್ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡಿದೆ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ಆಗಸ್ಟ್ 16ರಂದು 14 ಪೈಸೆ, ಆಗಸ್ಟ್ 17ರಂದು 16 ಪೈಸೆ. ಆಗಸ್ಟ್ 18ರಂದು 17 ಪೈಸೆ, ಆಗಸ್ಟ್ 20ರಂದು ಪ್ರತಿ 10 ಪೈಸೆ ಆಗಸ್ಟ್‌ 21ರಂದು 19 ಪೈಸೆ, ಆಗಸ್ಟ್ 22ರಂದು 16 ಪೈಸೆ ಆಗಸ್ಟ್ 23ರಂದು ಮತ್ತೆ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 14 ಪೈಸೆಯನ್ನು ಹೆಚ್ಚಿಸಿದೆ. ಇದರಿಂದಾಗಿ ಒಟ್ಟು ಕಳೆದ 8 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 1.06 ರೂಪಾಯಿ ಏರಿಕೆ ಮಾಡಿದಂತಾಗಿದೆ.

Also Read  ಸುಸೈಡ್ ಪಾಯಿಂಟ್ ಖ್ಯಾತಿಯ ನೇತ್ರಾವತಿ ಸೇತುವೆಗೆ ಬಿತ್ತು ರಕ್ಷಣಾ ಬೇಲಿ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೂಡ್ ಆಯಿಲ್ ಬೆಲೆ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ, ಮಹಾ ಕ್ರೂರಿ ಕೊರೊನಾ ಮತ್ತು ಲಾಕ್ಡೌನ್ ಕಾರಣಗಳಿಂದ ಜನ ಸಾಮಾನ್ಯರು ಎಷ್ಟೇ ಕಷ್ಟದಲ್ಲಿದ್ದರೂ ಹಾಗೂ ಕಾಂಗ್ರೆಸ್ ನಾಯಕರು ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ವ್ಯಾಪಕವಾದ ವಿರೋಧ ವ್ಯಕ್ತಪಡಿಸುತ್ತಿದ್ದರೂ ಇದ್ಯಾವುದನ್ನೂ ಪರಿಗಣಿಸದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪೆಟ್ರೊಲ್ ಬೆಲೆಯನ್ನು ಏರಿಸುತ್ತಲೇ ಇದೆ.ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಗಣನೀಯವಾಗಿ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಹೆಚ್ಚಳ ಆಗುತ್ತಲೇ ಇದೆ.

Also Read  ಧಕ್ಕೆ ಉಗ್ರಾಣ : ಟೆಂಡರ್ ಆಹ್ವಾನ

 

 

error: Content is protected !!
Scroll to Top