ಡಾ.ಎಸ್.ಆರ್ ನಾಗೇಂದ್ರ ಆತ್ಮಹತ್ಯೆ ಪ್ರಕರಣ ➤ ಪುತ್ತೂರು ಭಾರತೀಯ ವೈದ್ಯಕೀಯ ಸಂಘದಿಂದ ಸಂತಾಪ

(ನ್ಯೂಸ್ ಕಡಬ) newskadaba.com ಪುತ್ತೂರು. ಆ,24 : ನಂಜಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ರವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ  ಆತ್ಮಹತ್ಯೆಗೆ ಜಿಲ್ಲಾ ಪಂಚಾಯತ್‌ ಸಿಇಒ ಕಾರಣ ಎಂದು ಆರೋಪಿಸಿದ ವೈದ್ಯರು ಹಾಗೂ ಇತರೆ ಸಿಬ್ಬಂದಿ ಗುರುವಾರದಂದು ರಾತ್ರಿಯಿಡೀ ಪ್ರತಿಭಟನೆಯಲ್ಲಿ ತೊಡಗಿದ್ದರು.

 

ಈ ಸಂದರ್ಭದಲ್ಲಿ ನಂಜನಗೂಡು ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಭಾರತೀಯ ವೈದ್ಯಕೀಯ ಸಂಘದಿಂದ ಕಳೆದ ದಿನ ಸಂಜೆ ಮುಂಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಭಾರತೀಯ ವೈದ್ಯಕೀಯ ಸಂಘದ ಪದಾಧಿಕಾರಿಗಳು, ಮುಂಬತ್ತಿ ಬೆಳಗಿಸಿದರು.ಇತರ ಆಸ್ಪತ್ರೆಗಳಲ್ಲೂ ಮುಂಬತ್ತಿ ಬೆಳಗಿಸಿ ಸಂತಾಪ ಸೂಚಿಸಲಾಗಿದೆ.

 

Scroll to Top