ಕೊವೀಡ್-19 ಮುಕ್ತರಾದ ಎಸ್ ಪಿ ಬಾಲಸುಬ್ರಹ್ಮಣ್ಯಂ

(ನ್ಯೂಸ್ ಕಡಬ) newskadaba.com ಚೆನ್ನೈ. ಆ,24: ಜನಪ್ರಿಯ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ ಅವರು ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಕೊವಿಡ್ -19 ವರದಿ ನೆಗಟಿವ್ ಎಂದು ಬಂದಿದೆ. ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಗಾಯಕ ಎಸ್ಪಿಬಿ ಆರೋಗ್ಯ ಸ್ಥಿತಿ ಈಗ ಸುಧಾರಿಸಿದೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.

 

ಆಗಸ್ಟ್ 5ರಂದು ಶೀತ ಮತ್ತು ಜ್ವರ ಕಾಣಿಸಿಕೊಂಡು ಉಸಿರಾಟ ತೊಂದರೆಯಾಗಿದ್ದರಿಂದ ಎಸ್‌ಪಿಬಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಿಂದ ಅವರಿಗೆ ಕೊವಿಡ್ 19 ಲಕ್ಷಣಗಳಿರುವುದು ದೃಢಪಟ್ಟಿತ್ತು.16ಕ್ಕೂ ಅಧಿಕ ಭಾಷೆಯಲ್ಲಿ 40,000ಕ್ಕೂ ಹೆಚ್ಚು ಹಾಡುಗಳನ್ನು ಹಾಡಿರುವ ಹಿರಿಯ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ವಿಡಿಯೋ ಸಂದೇಶ ನೀಡಿ, ಕೋವಿಡ್ 19 ಸೋಂಕಿನ ಸಣ್ಣ ಪ್ರಮಾಣದ ಲಕ್ಷಣ ಕಾಣಿಸಿಕೊಂಡಿರುವುದಾಗಿ ತಿಳಿಸಿದ್ದರು.

Also Read  ಮಂಗಳೂರು: ತೆಂಗು ಫಸಲು ಟೆಂಡರ್/ಹರಾಜು

 

error: Content is protected !!
Scroll to Top