ಸಬಳೂರು: ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಶಿಬಿರ

(ನ್ಯೂಸ್ ಕಡಬ) newskadaba.com ಕೊಯಿಲ. ಆ,24: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ದಿ ಯೋಜನೆಯ ಪ್ರಗತಿ ಬಂಧು, ಸ್ವಸಹಾಯ ಸಂಘಗಳ ಸಬಳೂರು ಒಕ್ಕೂಟದ ಆಶ್ರಯದಲ್ಲಿ ಸರಕಾರಿ ಸೌಲಭ್ಯಗಳ ಮಾಹಿತಿ, ಆಯುಷ್ಮಾನ್‌ ಕಾರ್ಡ್‌ ನೋಂದಾವಣೆ ಮತ್ತು ವಿತರಣಾ ಕಾರ್ಯಕ್ರಮವು ಶ್ರೀ ರಾಮ ಭಜನ ಮಂದಿರದ ವಠಾರದಲ್ಲಿ ಕಳೆದ ದಿನ ನಡೆಯಿತು.

ಸಬಳೂರು ಅಂಗನವಾಡಿ ಕೇಂದ್ರದ ವಠಾರದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಸ್.ಬಾಲಕೃಷ್ಣ ಕೊಯಿಲ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿ ಸರಕಾರದ ಸವಲತ್ತುಗಳು ಜನರಿಗೆ ಒದಗಿಸುವ ಮಹತ್ಕಾರ್ಯವನ್ನು ಮಾಡುತ್ತಾ ದೇಶದ ಕಟ್ಟ ಕಡೆಯ ಜನರು ಕೂಡ ಸರಕಾರಿ ಸವಲತ್ತುಗಳಿಂದ ವಂಚಿತರಾಗಬಾರದು ಎಂದು ಪಣತೊಟ್ಟಿರುವುದು ಶ್ಲಾಘನೀಯ ಎಂದರು. ಸಬಳೂರು ಒಕ್ಕೂಟದ ಅಧ್ಯಕ್ಷ ಗಣೇಶ್‌ ಎರ್ಮಡ್ಕ ಸಭೆಯ ಅಧ್ಯಕ್ಷತೆವಹಿಸಿದ್ದರು. ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಬುಡಲೂರು ಉಪಸ್ಥಿತರಿದ್ದರು.ಯೋಜನೆಯ ಜ್ಞಾನ ವಿಕಾಸ ಕೇಂದ್ರಗಳ ಪುತ್ತೂರು ತಾಲೂಕು ಸಮನ್ವಯ ಅಧಿಕಾರಿ ಸುಜಾತ, ಸೇವಾ ಪ್ರತಿನಿಧಿ ಜಯಶ್ರೀ, ಕಡಬ ವಲಯ ಮೇಲ್ವಿಚಾರಕ ಬಾಬು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Also Read  ಮಂಗಳೂರು: ಆನ್‌ಲೈನ್ ವಂಚನೆ ➤ ಲಕ್ಷಾಂತರ ರೂ. ಹಣ ಕಳೆದುಕೊಂಡ ವ್ಯಕ್ತಿ

error: Content is protected !!
Scroll to Top