ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ನವದೆಹಲಿ . ಆ,24:  ಶ್ವಾಸಕೋಶ ಮತ್ತು ಮೂತ್ರಪಿಂಡದ ಸಮಸ್ಯೆಯಿಂದ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಸಚಿವ ರಾಮ್ ವಿಲಾಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಭಾನುವಾರ ದೆಹಲಿಯ ಪೋರ್ಟಿಸ್ ಹೃದಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ 2017ರಲ್ಲಿ ಲಂಡನ್​ನಲ್ಲಿ ಆಪರೇಷನ್​ ಮಾಡಲಾಗಿತ್ತು. ನಿನ್ನೆ ಆಸ್ಪತ್ರೆಗೆ ದಾಖಲಾಗಿರುವ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಅದಕ್ಕೂ ಮೊದಲು ಅವರು ಆ್ಯಂಜಿಯೋಪ್ಲಾಸ್ಟಿಗೆ ಕೂಡ ಒಳಗಾಗಿದ್ದರು ಎಂದು ಎಕನಾಮಿಕ್ ಟೈಮ್ಸ್​ ವರದಿ ಮಾಡಿದೆ.ರಾಮ್ ವಿಲಾಸ್ ಪಾಸ್ವಾನ್ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ. ಅವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

Also Read  ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ - ಕರಾವಳಿಯಿಂದ ನೇರ ರೈಲು ಸಂಪರ್ಕ ಕಲ್ಪಿಸಲು ಮನವಿ

 

 

 

 

error: Content is protected !!
Scroll to Top