• ಬೆಳ್ತಂಗಡಿ: ಕಳೆದ ವರ್ಷದ ಪ್ರವಾಹ ಸಂದರ್ಭ ಸಂಗ್ರಹವಾದ ಹಣದ ಲೆಕ್ಕ ನೀಡುವಂತೆ ಕಾಂಗ್ರೆಸ್ ಒತ್ತಾಯ – ಹರೀಶ್ ಪೂಂಜಾ ಕಛೇರಿ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24.  ಶಾಸಕ ಹರೀಶ್ ಪೂಂಜ ಅವರು ಕಳೆದ ವರ್ಷ ಉಂಟಾಗಿದ್ದ ಪ್ರವಾಹದ ಸಂದರ್ಭದಲ್ಲಿ ‘ಕಾಳಜಿ ಫಂಡ್’ ಎಂಬ ಹೆಸರಿನಲ್ಲಿ ಸಂಗ್ರಹಿಸಲಾಗಿದ್ದ ಹಣದ ಲೆಕ್ಕ ಕೊಡಿ ಎಂದು ಬೆಳ್ತಂಗಡಿಯಲ್ಲಿ ಶಾಸಕರ ಕಚೇರಿ ಮುಂದೆ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಮೊದಲು ಮಾಜಿ ಶಾಸಕ ವಸಂತ ಬಂಗೇರ ಅವರ ಕಚೇರಿಯ ಮುಂಭಾಗದಲ್ಲಿ ಜಮಾವಣೆಗೊಂಡು ಪ್ರತಿಭಟನೆಯನ್ನ ನಡೆಸಿದ ಬಳಿಕ, ಶಾಸಕರ ಸರಕಾರಿ ಕಚೇರಿಯ ಎದುರು ಮೆರವಣಿಗೆಯಲ್ಲಿ ತೆರಳಲು ಪ್ರಯತ್ನಿಸಿದ ವೇಳೆ ಪೊಲೀಸರು ಅವರನ್ನು ತಡೆಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಪ್ರತಿಭಟನಾಕಾರರು ಶಾಸಕ ಹರೀಶ್ ಪೂ0ಜಾ ಅವರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು. ಶಾಸಕ ವಸಂತ ಬಂಗೇರ ರವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಶೈಲೇಶ್ ಕುಮಾರ್ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿದನ್, ಜಿ.ಪಂ. ಸದಸ್ಯ ಶಾಹುಲ್ ಹಮೀದ್ ಹಾಗೂ ಇತರ ಮುಖಂಡರುಗಳು ಭಾಗವಹಿಸಿದ್ದರು.

Also Read  ನೀರಿನಲ್ಲಿ ಮುಳುಗಿ ಬಾಲಕರಿಬ್ಬರು ಮೃತ್ಯು

error: Content is protected !!
Scroll to Top