ಮಂಗಳೂರು: ಧಾರಾಕಾರ ಮಳೆಯಿಂದಾಗಿ ತತ್ತರಿಸಿದ ಕರಾವಳಿ ► ರಸ್ತೆಯಲ್ಲಿ ಸಂಚರಿಸಲಾಗದೆ ಪರದಾಡುತ್ತಿರುವ ವಾಹನ ಸವಾರರು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.16. ವಿಪರೀತ ಮಳೆಯಿಂದಾಗಿ ರಾಜ್ಯ ರಾಜಧಾನಿಯು ತತ್ತರಗೊಂಡು ಇದೀಗ ಸಹಜ ಸ್ಥಿತಿಗೆ ಮರಳುತ್ತಿರುವುದರ ಮಧ್ಯೆ ಧಾರಾಕಾರ ಮಳೆಯಿಂದಾಗಿ ಕರಾವಳಿಯ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಜಾಮ್ ನಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಶುಕ್ರವಾರ ರಾತ್ರಿಯಿಂದ ನಿರಂತರವಾಗಿ ದಕ್ಷಿಣ ಕನ್ನಡ ಜಿಯೋ ಪುತ್ತೂರು, ಬೆಳ್ತಂಗಡಿ, ಸುಳ್ಯ ಪರಿಸರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಬಹುತೇಕ ರಸ್ತೆಗಳು ಜಲಾವೃತಗೊಂಡಿದೆ. ವಾಹನ ಸವಾರರು ಪರದಾಡುವಂತಾಗಿದೆ. ಕೆಲವು ಅಂಗಡಿಯೊಳಗಡೆ ನೀರು ನುಗ್ಗಿರುವುದಾಗಿ ವರದಿಯಾಗಿದೆ.

Scroll to Top