ವಿಕಲಚೇತನರ ಮೀಸಲಾತಿ ಏರಿಕೆಗೆ ಸಿಎಂಗೆ ಮನವಿ ➤ ಸಚಿವ ಕೋಟ

(ನ್ಯೂಸ್ ಕಡಬ) newskadabsa.com ಮಂಗಳೂರು, ಆ. 24. ಅಂಗವಿಕಲತೆ ಎಂಬುದು ಶಾಪವಲ್ಲ, ಅವರು ದೇವರ ಮಕ್ಕಳು, ಅವರನ್ನು ನಾವು ದೇವರಂತೆ ಕಾಣಬೇಕು. ಅವರ ಸೇವೆಯನ್ನು ಮಾಡಿದರೆ ದೇವರ ಸೇವೆ ಮಾಡಿದಂತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.


ಅವರು ಸೋಮವಾರ ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್, ಕೃತಕ ಅಂಗಾಂಗ ತಯಾರಿಕಾ ಕಾರ್ಪೋರೇಷನ್ ಆಫ್ ಇಂಡಿಯಾ(ಅಲಿಂಕೋ) ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ದಕ್ಷಿಣ ಕನ್ನಡ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಮಾತನಾಡಿದರು. ವಿಕಲಚೇತರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ತರಲು ಸಕಾರದಿಂದ ಅನೇಕ ಯೋಜನೆಗಳಲ್ಲಿ ವಿವಿಧ ಸೌಲಭ್ಯಗಳನ್ನು ನೀಡುತ್ತಿದ್ದು, ಅದರ ಜೊತೆಯಲ್ಲಿ ವಿವಿಧ ಇಲಾಖೆಯಲ್ಲಿ ಸರ್ಕಾರಿ ಹುದ್ದೆಗೆ ಅವಕಾಶ ನೀಡಲಾಗಿದೆ. ಇದರಿಂದ ಅವರು ಸ್ವಾವಲಂಬನೆ ಜೀವನ ಸಾಗಿಸಲು ಸಾಧ್ಯವಾಗಿದೆ. ವೈದ್ಯಾಧಿಕಾರಿಗಳು ಅಂಗವಿಕಲ ಪ್ರಮಾಣ ಪತ್ರವನ್ನು ನೀಡುವ ಸಂದರ್ಭದಲ್ಲಿ ಕೇವಲ ಅಂಕಗಳನ್ನು ಆಧರಿಸದೆ ವಿಕಲತೆಯನ್ನು ಮನಗೊಂಡು ಅವರಿಗೆ ಪ್ರಮಾಣ ಪತ್ರ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಶೇಕಡಾ 75 ರಷ್ಟು ಪಾರ್ಶ‍್ವವಾಯು ರೋಗದಿಂದ ಬಳಲುವವರಿಗೆ ದಿವ್ಯಾಂಗನ ಯೋಜನೆಯಡಿ ಸೌಲಭ್ಯ ಕಲ್ಪಿಸಲಾಗುವುದು.

 

Also Read  ಉಳ್ಳಾಲ ಉರೂಸ್ ಹಿನ್ನೆಲೆ ➤ ಮಾ. 06ರವರೆಗೆ ರಾತ್ರಿ ಬೀಚ್ ಪ್ರವೇಶಕ್ಕೆ ನಿರ್ಬಂಧ..!

ಆನೆಕಾಲು ರೋಗಕ್ಕೆ ಒಳಗಾದವರಿಗೆ ಸರ್ಕಾರದಿಂದ ಹಲವು ಯೋಜನೆಗಳನ್ನು ನೀಡಿದೆ. ಅಂಗವಿಕಲರಿಗೆ ದೊರಕುವ ಎಲ್ಲಾ ಸೌಲಭ್ಯಗಳನ್ನು ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ನೀಡಬೇಕು.  ಮೀಸಲಾತಿಯನ್ನು ಮತ್ತಷ್ಟು ಏರಿಕೆ ಮಾಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿಯನ್ನು ಮಾಡಲಾಗುವುದು. ಆರೋಗ್ಯ ಇಲಾಖೆ, ವಿಕಲಚೇತನರ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಒಗ್ಗೂಡಿ ಜಿಲ್ಲೆಯಲ್ಲಿ ಸರ್ಕಾರದಿಂದ ಸೌಲಭ್ಯಗಳನ್ನು ಪಡೆದವರ ಪಟ್ಟಿ ಮಾಡಬೇಕು. ಸೌಲಭ್ಯದಿಂದ ಯಾರು ಕೂಡ ವಂಚಿತರಾಗಬಾರದು, ಎಲ್ಲಾ ವಿಕಲಚೇತನರಿಗೆ ಸರಕಾರದ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅಧಿಕಾರಿಗಳು ಸರ್ವೇ ನಡೆಸಿ ವರದಿಯನ್ನು ಸಿದ್ಧಪಡಿಸಬೇಕು ಎಂದು ಸಚಿವರು ತಿಳಿಸಿದರು.

ಅಂಗವಿಕಲರಿಗೆ ನೀಡುವ ವಸ್ತುಗಳು ಉತ್ತಮ ಗುಣಮಟ್ಟದಿಂದ ಕೂಡಿರಲಿ, ಅವರಿಗೆ ಮೋಸ ಮಾಡಿದರೆ ದೇವರಿಗೆ ಮೋಸ ಮಾಡಿದಂತೆ, , ಜಿಲ್ಲೆಯಲ್ಲಿ ಇರುವ ಎಲ್ಲಾ ಅಂಗವಿಕಲ ಸಂಸ್ಥೆಗಳು ಸರ್ಕಾರದಿಂದ ಬರುವ ಯೋಜನೆಗಳನ್ನು ಅವರಿಗೆ ಸೂಕ್ತವಾಗಿ ಶೀಘ್ರವಾಗಿ ತಲುಪವಂತೆ ಶ್ರಮ ವಹಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ವಿಕಲಚೇತನರನ್ನು ನಾವು ಆಲಕ್ಷ್ಯ ಮಾಡದೇ ಪ್ರೀತಿ, ವಾತ್ಸಲ್ಯನಿಂದ ಕಾಣಬೇಕು. ಕ್ರೀಡಾ ರಂಗದಲ್ಲಿ ವಿಕಲಚೇತರ ಸಾಧನೆ ಅಮೋಘವಾಗಿದೆ ಅವರನ್ನು ನೋಡಿ ನಾವು ಮುಂದುವರಿಯಬೇಕು ಅವರಂತೆ ನಾವು ಸಾಧನೆ ಮಾಡಬೇಕು ಯಾವುದೇ ಕಾರಣಕ್ಕೂ ಅವರು ಕುಗ್ಗಬಾರದು ಎಂದು ಹೇಳಿದರು.
     

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಎಂ.ಆರ್.ಪಿ.ಎಲ್. ಡಿಜಿಎಂ ವೀಣಾ  ಕಳೆದ 16 ವರ್ಷದಿಂದ ಎಂ.ಆರ್.ಪಿ.ಎಲ್. ಸಂಸ್ಥೆಯು ವಿಕಲಚೇತನರಿಗೆ ರೂ.2.5 ಕೋಟಿ ಮೊತ್ತದ ಸಲಕರಣೆಯನ್ನು ನೀಡಿದ್ದು, ಮುಂದಿನ ದಿನದಲ್ಲಿ ಇನ್ನಷ್ಟು ಯೋಜನೆಗಳನ್ನು ಅವರಿಗಾಗಿ ನೀಡಲಾಗುವುದು ಎಂದರು. ಜಿಲ್ಲಾ ಪಂಚಾಯತ್ ಅಧ್ಯಕ್ಷತೆ ಮೀನಾಕ್ಷಿ ಶಾಂತಿಗೋಡು ಮಾತನಾಡಿ, ಸರರ್ಕಾರದಿಂದ ವಿಕಲಚೇತರಿಗೆ ಮುಂದಿನ ದಿನದಲ್ಲಿ ಹೆಚ್ಚಿನ ಸೌಲಭ್ಯಗಳನ್ನು ದೊರಕಿಸಿಕೊಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಲ್ಲಿ ಮನವಿಯನ್ನು ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಸ್ಮಾನ್,  ಜಿಲ್ಲಾ ವಿಕಲಚೇತನ ಕಲ್ಯಾಣಾಧಿಕಾರಿ ಡಿ. ಯಮುನಾ, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ  2018-19 ಮತ್ತು 2019-20 ನೇ ಸಾಲಿನ 12 ದ್ವಿಚಕ್ರ ವಾಹನ, ಟಾಕಿಂಗ್ ಲ್ಯಾಪ್ಟಾಪ್ ಯೋಜನೆಯಡಿ 10 ಲ್ಯಾಪ್ಟಾಪ್, ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ವತಿಯಿಂದ ರೂ. 45 ಲಕ್ಷ ಮೌಲ್ಯದ ವಿವಿಧ ಸಾಧನ ಸಲಕರಣೆಗಳನ್ನು ಫಲಾನುಭವಿಗಳಿಗೆ ವಿತರಣೆ ಮಾಡಿದರು.

Also Read  ಸುಳ್ಯದಲ್ಲಿ ಶಾಸಕ ಅಂಗಾರ ಗೆದ್ದು ಸಚಿವರಾಗಲಿದ್ದಾರೆ : ಪುಲಸ್ತ್ಯಾ ರೈ

error: Content is protected !!
Scroll to Top