ಡಿಪ್ಲೊಮಾ ಪ್ರವೇಶ ಪ್ರಕ್ರಿಯೆ ➤ ಅವಧಿ ವಿಸ್ತರಣೆ

(ನ್ಯೂಸ್ ಕಡಬ) ಮಂಗಳೂರು, ಆ. 24.  2020-21 ನೇ ಸಾಲಿನ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮತ್ತು ಅನುದಾನಿತ ಪಾಲಿಟೆಕ್ನಿಕ್‍ಗಳಲ್ಲಿ ಡಿಪ್ಲೋಮಾ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ. / ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಪಡೆಯುವ ಹಾಗೂ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು  ಆಗಸ್ಟ್ 29 ರಂದು ಸಂಜೆ 5 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ವರ್ಷ ಕೋವಿಡ್-19 ಸಾಂಕ್ರಾಮಿಕ ರೋಗವು ಜಾಗತಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆನ್-ಲೈನ್ ನಾನ್ ಇಂಟರಾಕ್ಟಿವ್ ಕೌನ್ಸಿಲ್ (ಆನ್‍ಲೈನ್ ಆಪ್ಷನ್ ಎಂಟ್ರಿ) ನಡೆಸುವ ಮೂಲಕ ರಾಜ್ಯದ ಯಾವುದೇ ಪಾಲಿಟೆಕ್ನಿಕ್‍ಗಳಲ್ಲಿ ಪ್ರವೇಶ ಪಡೆಯಬಹುದಾದ ವ್ಯವಸ್ಥೆಯನ್ನು ಸರ್ಕಾರವು ಅಳವಡಿಸಿದೆ.

Also Read  ಜೈನಮುನಿಗಳ ರಕ್ಷಣೆಗೆ ಗೃಹಸಚಿವರ ಭರವಸೆ- ಉಪವಾಸ ಕೈಬಿಟ್ಟ ಗುಣಧರ ನಂದಿ ಮಹಾರಾಜ

ಹೆಚ್ಚಿನ ವಿವರಗಳನ್ನು https;//dtek.karnataka.gov.in  ಅಥವಾ www.cetonline.karnataka.gov.in/kea/ ಪಡೆಯಬಹುದು ಅಥವಾ ಸಹಾಯ ಕೇಂದ್ರವಾದ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಬೋಂದೆಲ್, ಮಂಗಳೂರು ಸಂಸ್ಥೆಯ ಪ್ರಾಂಶುಪಾಲರ ನೇತೃತ್ವದಲ್ಲಿ ಬೋಧಕ ಸಿಬ್ಬಂದಿಯವರ ಸಹಕಾರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ವಿವಿಧ ಪ್ರವರ್ಗಗಳಡಿ ಹಾಗೂ ವಿಶೇಷ ಮೀಸಲಾತಿಯಡಿ ಪ್ರವೇಶ ಬಯಸಿದ್ದಲ್ಲಿ ಸಂಬಂಧಿಸಿದ ದಾಖಲಾತಿಗಳನ್ನು ಅಪ್‍ಲೋಡ್ ಮಾಡಲು ಸಂಸ್ಥೆಯ ಪ್ರಾಂಶುಪಾಲರ ನೇತೃತ್ವದಲ್ಲಿ ಬೋಧಕ ಸಿಬ್ಬಂದಿಯವರ ಸಹಕಾರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸರಕಾರಿ ಮಹಿಳಾ ಪಾಲಿಟೆಕ್ನಿಕ್ ಮಂಗಳೂರು, ದೂರವಾಣಿ ಸಂಖ್ಯೆ 0824 2482334 ನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top