ಬಹುಮಹಡಿ ಕಟ್ಟಡ ಕುಸಿತ ದುರಂತ ➤ ಅವಶೇಷದಡಿ ಹಲವಾರು ಮಂದಿ ಸಿಲುಕಿರುವ ಶಂಕೆ

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ. ಆ,25:  ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಹಿನ್ನೆಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಘಟನೆ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಮಹದ್ ನಲ್ಲಿ ನಡೆದಿದೆ.

 


ಎನ್ ಡಿಆರ್ ಎಫ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದು, ಈಗಾಗಲೇ ಒಟ್ಟು 24 ಮಂದಿಯನ್ನು ರಕ್ಷಿಸಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಸೋಮವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 18 ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Also Read  ಬೆಂಗಳೂರು: ಮತ ಎಣಿಕೆ ದಿನದಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

 

error: Content is protected !!
Scroll to Top