ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾದ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,25:  ಕರ್ನಾಟಕ ಕೇಡರ್​​ನ ನಿವೃತ್ತ IPS ಅಧಿಕಾರಿ ಕೆ. ಅಣ್ಣಾಮಲೈ ಬಿಜೆಪಿಗೆ ಅಧಿಕೃತವಾಗಿ  ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿಯವ ಬಿಜೆಪಿಯ ಮುಖ್ಯ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಸೇರಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮುರಳಿಧರ್ ರಾವ್, ತಮಿಳುನಾಡು ಬಿಜೆಪಿಯ ಅಧ್ಯಕ್ಷ ಮುರುಗನ್ ಉಪಸ್ಥಿತಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ತಮಿಳುನಾಡು ರಾಜ್ಯದಲ್ಲಿ ಬಿಜೆಪಿಯನ್ನ ಸಂಘಟನೆ ಮಾಡುವ ಉದ್ದೇಶದಿಂದ ಅಣ್ಣಾಮಲೈ ಅವರನ್ನ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಮಿಳುನಾಡಿನ ಬಿಜೆಪಿಗೆ ಬೆನ್ನೆಲುಬಾಗಿ ಕಾರ್ಯನಿರ್ವಹಿಸಲಿದ್ದಾರೆ ಮುರಳಿಧರ್ ರಾವ್ ತಿಳಿಸಿದ್ದಾರೆ.  ಅಣ್ಣಾಮಲೈ ಬಿಜೆಪಿ ಸೇರ್ಪಡೆಯನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವಾಗತಿಸಿದ್ದಾರೆ.

Also Read  ತುಳುಭವನದ ಆವರಣಗೋಡೆ ಕಾಮಗಾರಿಗೆ ಶಂಕುಸ್ಥಾಪನೆ

 

error: Content is protected !!
Scroll to Top