ಪದವಿ ಕಾಲೇಜುಗಳು ‌ಅಕ್ಟೋಬರ್ ಒಂದರಿಂದ ಪುನರಾರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು. ಆ,25: ಕೋವಿಡ್‍ನಿಂದ ಮುಂದೂಡಲಾಗಿದ್ದ ಶಾಲಾಕಾಲೇಜುಗಳ ತರಗತಿಗಳು ಅಕ್ಟೋಬರ್ ನಿಂದ ಪುನರಾರಂಭಗೊಳ್ಳಲಿದೆ. ಸೆಪ್ಟೆಂಬರ್ ವರೆಗೂ ಆನ್‍ಲೈನ್ ತರಗತಿಗಳು ಮುಂದುವರೆಯಲಿವೆ ಎಂದು ತಿಳಿದುಬಂದಿದೆ. ಅನ್ಲಾಕ್ 4.0ನಲ್ಲಿ ಹಂತ ಹಂತವಾಗಿ ಶಾಲೆ ಕಾಲೇಜು ತೆರೆಯುವ ಸಾಧ್ಯತೆ ಇದ್ದು, ಸೆಪ್ಟೆಂಬರ್ 1ರಿಂದ ಪದವಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ತರಗತಿಗಳು ಆರಂಭವಾಗಲಿದೆ. ಅಕ್ಟೋಬರ್ 1ರಿಂದ ಪದವಿ ಕಾಲೇಜುಗಳು ತೆರೆಯಲಿವೆ. ಇದರಂತೆ ಪದವಿ, ಪಿಯು, ಹೈಸ್ಕೂಲ್ ಬಳಿಕ ಪ್ರಾಥಮಿಕ ಶಾಲೆ ತೆರೆಯುವ ಚಿಂತನೆ ಮಾಡಲಾಗಿದೆ.

ಸಾಮಾನ್ಯ ವರ್ಷಗಳಲ್ಲಿ ಈ ವೇಳೆಗೆ ಶಾಲೆಗಳು ವರ್ಷದ ಅರ್ಧ ಅವಧಿಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ ಈ ಬಾರಿ ಕಡಿಮೆ ಅವಯ ಶೈಕ್ಷಣಿಕ ವರ್ಷವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಯೋಜನೆಯನ್ನು ಸಿದ್ಧಪಡಿಸಿದೆ. ಈಗಾಗಲೇ 4-5 ತಿಂಗಳು ಶಾಲೆ ಆರಂಭ ತಡವಾಗಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಪಠ್ಯ ಬೋಧನೆ ಅಸಾಧ್ಯವಾಗಿದೆ. ಆದರೆ  ಶೇ.30ರಷ್ಟು ಕಡಿತ ಮಾಡಿ ಮಕ್ಕಳಿಗೆ ಅತ್ಯಗತ್ಯವಾದ ಪಠ್ಯ ಮಾತ್ರ ಉಳಿಸಿಕೊಳ್ಳಲು ಚಿಂತನೆ ಮಾಡಲಾಗಿದೆ. ಪಠ್ಯ ಕಡಿತ ಸಮಿತಿ ವರದಿ ಬಳಿಕ ಅಂತಿಮ ರೂಪುರೇಷೆ ಲಭಿಸಲಿದೆ.ಈಗಾಗಲೇ ರಾಜ್ಯದಲ್ಲಿ ಶುರುವಾಗಬೇಕಿದ್ದ ಶೈಕ್ಷಣಿಕ ತರಗತಿಗಳು ಕೋವಿಡ್ ಭೀತಿಯಿಂದ ಸ್ಥಗಿತವಾಗಿವೆ. ಈ ನಡುವೆ ಜುಲೈನಲ್ಲಿ ಆರಂಭ ಮಾಡಲು ಚಿಂತನೆ ನಡೆಸಲಾಗಿತ್ತು. ಆದರೆ, ಜೂನ್‍ನಲ್ಲಿ ಎಸ್‍ಎಸ್‍ಎಲ್ಸಿ ಪರೀಕ್ಷೆ, ದ್ವಿತೀಯ ಪಿಯುಸಿಯ ಕೊನೆಯ ಪರೀಕ್ಷೆ ನಡೆಸಬೇಕಾಗಿತ್ತು. ಹೀಗಾಗಿ ಜುಲೈ ಮೊದಲ ವಾರದಲ್ಲಿ ಶಾಲೆಗಳನ್ನ ಆರಂಭಿಸಲು ಯೋಜನೆ ರೂಪಿಸಲಾಗಿತ್ತು. ಈಗಾಗಲೇ ಶಾಲಾ-ಕಾಲೇಜುಗಳು ಆನ್ ಲೈನ್ ಪಾಠ ಪ್ರವಚನ ಆರಂಭಿಸಿವೆ. ಇದೀಗ ಶಾಲಾ-ಕಾಲೇಜು ಆರಂಭವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

Also Read  ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪಿಸಲು ನಗರಸಭೆಯಿಂದ ಅನುಮತಿ ಕಡ್ಡಾಯ ಗೌರಿ ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಸೂಚನೆ

ಸೆಪ್ಟೆಂಬರ್ ಅನ್‍ಲಾಕ್-3 ಮುಗಿಯಲಿದ್ದು, 4 ಶುರುವಾಗಲಿದೆ. ಹೀಗಾಗಿ ಎಲ್ಲರ ಚಿತ್ತ ಕೇಂದ್ರ ಸರ್ಕಾರದ ನಿರ್ಧಾರದತ್ತ ನೆಟ್ಟಿದೆ. ದೇಶದಲ್ಲಿ ಮೂರನೇ ಹಂತದ ಅನ್ಲಾಕ್ ನಿಯಮಗಳು ಅಂತ್ಯದಲ್ಲಿದ್ದು, ಸೆಪ್ಟೆಂಬರ್ 1 ರಿಂದ 4ನೇ ಹಂತದ ಅನ್ಲಾಕ್ ಮಾರ್ಗಸೂಚಿಗಳು ಜಾರಿಯಾಗಲಿದೆ. ಕೇಂದ್ರ ಸರ್ಕಾರ ಈ ಬಾರಿ ಯಾವುದಕ್ಕೆಲ್ಲ ವಿನಾಯಿತಿ ನೀಡಲಿದೆ ಎಂಬ ಲೆಕ್ಕಾಚಾರವೂ ಆರಂಭವಾಗಿದೆ. ಇದರ ನಡುವೆಯೇ ಶಾಲೆ ಆರಂಭಿಸಲು ಶೈಕ್ಷಣಿಕ ವರ್ಷದ ಪ್ಲ್ಯಾನ್ ಸಿದ್ಧಪಡಿಸಲಾಗುತ್ತಿದೆ. ಉಳಿದಂತೆ ಶೈಕ್ಷಣಿಕ ವರ್ಷದ ಅವ ಕಡಿತವಾದ ಹಿನ್ನೆಲೆಯಲ್ಲಿ ಕಳೆದು ಹೋದ ಅವ ಸರಿದೂಗಿಸಲು ಶನಿವಾರ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸುವ ಚಿಂತನೆ ಇದೆ. ಈ ಹೆಚ್ಚುವರಿ ಅವಧಿಯಲ್ಲಿ ನಿಗದಿತ ಪಠ್ಯ ಮುಗಿಸುವ ಯೋಜನೆ ಮಾಡಲಾಗಿದೆ. ಇದರೊಂದಿಗೆ ಅನೇಕ ಮಹಾ ಪುರುಷರ ಜಯಂತಿಗೆ ನೀಡಲಾಗುವ ರಜೆ ರದ್ದು ಮಾಡಿ ಈ ಸಮಯವನ್ನು ಬೋಧನೆಗೆ ಬಳಸಲು ಚಿಂತನೆ ನಡೆದಿದೆ. ಶಾಲೆಗಳು ನಿಗದಿಯಂತೆ ನಡೆದಿದ್ದರೆ ಅನೇಕ ಪರೀಕ್ಷೆಗಳನ್ನು ನಡೆಸಲಾಗುತ್ತಿತ್ತು. ಆದರೆ ಈ ಬಾರಿ ಈ ಎಲ್ಲಾ ಪರೀಕ್ಷೆ ಬದಲು ಮಿತವಾದ ಪರೀಕ್ಷೆ ನಡೆಸಲು ಚಿಂತಿಸಲಾಗಿದೆ. ಕಿರುಪರೀಕ್ಷೆ, ಮಧ್ಯ ವಾರ್ಷಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ಕೈಬಿಟ್ಟು ಮಿತವಾದ ಪರೀಕ್ಷಾ ಪದ್ಧತಿ ಆಳವಡಿಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಶಿಕ್ಷಣ ಇಲಾಖೆ ಮೂಲಗಳಿಂದ ಮಾಹಿತಿ ಲಭಿಸಿದೆ.

Also Read  ಬಂಟ್ವಾಳ: ಬೈಕ್ ಸ್ಕಿಡ್ ➤ ಕಡಬದ ಮಹಿಳೆ ಮೃತ್ಯು

 

 

error: Content is protected !!
Scroll to Top