(ನ್ಯೂಸ್ ಕಡಬ) newskadaba.com ಚೆನ್ನೈ, ಸೆ.17. ಇತ್ತೀಚೆಗೆ ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಗೆಲುವು ಸಾಧಿಸಿದ್ದ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಕ್ಕೆ ಇದೀಗ ಆಸ್ಟ್ರೇಲಿಯ ವಿರುದ್ಧ ಸವಾಲು ಎದುರಾಗಿದ್ದು, ಐದು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯ ಚೆನ್ನೈನಲ್ಲಿ ರವಿವಾರ ನಡೆಯಲಿದೆ.
ಈ ಸರಣಿಯು ಉಭಯ ತಂಡಗಳಿಗೂ ಐಸಿಸಿ ರ್ಯಾಂಕಿಂಗ್ ದೃಷ್ಟಿಯಿಂದ ಅತ್ಯಂತ ಮುಖ್ಯವಾಗಿದೆ. ಕಳೆದ ವರ್ಷ ಜನವರಿಯಲ್ಲಿ ಆಸ್ಟ್ರೇಲಿಯದಲ್ಲಿ ನಡೆದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಪ್ರವಾಸಿ ಭಾರತದ ವಿರುದ್ಧ ಆಸ್ಟ್ರೇಲಿಯ 4-1 ಅಂತರದಲ್ಲಿ ಸರಣಿ ಜಯ ಗಳಿಸಿತ್ತು. ಉಭಯ ತಂಡಗಳು ಚೆನ್ನೈನಲ್ಲಿ ಮೂರು ದಶಕಗಳ ಬಳಿಕ ಮುಖಾಮುಖಿಯಾಗಲಿದೆ.
ಚೆನ್ನೈನ ಚಿಪಾಕ್ ಸ್ಟೇಡಿಯಂನಲ್ಲಿ ಇಂದು ಮಧ್ಯಾಹ್ನ1.30 ಕ್ಕೆ ಪಂದ್ಯ ಪ್ರಾರಂಭವಾಗಲಿದೆ. ಭಾರತದ ತಂಡದಲ್ಲಿ ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ, ಅಜಿಂಕ್ಯ ರಹಾನೆ, ಲೋಕೇಶ್ ರಾಹುಲ್, ಮನೀಷ್ ಪಾಂಡೆ, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಎಂ.ಎಸ್ ಧೋನಿ(ವಿಕೆಟ್ ಕೀಪರ್), ರವೀಂದ್ರ ಜಡೇಜ, ಭುವನೇಶ್ವರ ಕುಮಾರ್,ಜಸ್‌ಪ್ರೀತ್ ಬುಮ್ರಾ, ಉಮೇಶ್ ಯಾದವ್, ಮುಹಮ್ಮದ್ ಶಮಿ, ಯುಜುವೇಂದ್ರ ಚಾಹಲ್, ಕುಲದೀಪ್ ಯಾದವ್ ಆಡಲಿದ್ದು, ಆಸ್ಟ್ರೇಲಿಯಾ ತಂಡದಲ್ಲಿ ಸ್ಟೀವ್ ಸ್ಮಿತ್(ನಾಯಕ), ಡೇವಿಡ್ ವಾರ್ನರ್, ಹಿಲ್ಟನ್ ಕಾರ್ಟ್‌ವೈಟ್, ಟ್ರಾವಿಸ್ ಹೆಡ್,ಗ್ಲೆನ್ ಮ್ಯಾಕ್ಸ್‌ವೆಲ್,ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವೇಡ್(ವಿಕೆಟ್ ಕೀಪರ್), ಜೇಮ್ಸ್ ಫಾಕ್ನರ್,ನಥಾನ್ ಕೌಲ್ಟರ್ ನೀಲ್, ಪ್ಯಾಟ್ ಕಮಿನ್ಸ್,ಕೇನ್ ರಿಚರ್ಡ್ಸನ್.ಆ್ಯಸ್ಟನ್ ಅಗರ್, ಆ್ಯಡಮ್ ಝಾಂಪ, ಪೀಟರ್ ಹ್ಯಾಂಡ್ಸ್‌ಕಂಬ್ ಆಡಲಿದ್ದಾರೆ.