ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ನೇಮಕಾತಿ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು ಆ. 26. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ನೇಮಕಾತಿ ಆಯ್ಕೆ ಪಟ್ಟಿ ಪ್ರಕ್ರಿಯೆಯಲ್ಲಿ  ಖಾಲಿ ಇರುವ 2 ಅಂಗನವಾಡಿ ಕಾರ್ಯಕರ್ತೆ ಹಾಗೂ 13 ಸಹಾಯಕಿಯರ ಆಯ್ಕೆ ಸಂಬಂಧ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಅದರಂತೆ 1 ಅಂಗನವಾಡಿ ಕಾರ್ಯಕರ್ತೆ ಹಾಗೂ 8 ಮಂದಿ ಸಹಾಯಕಿಯರನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲಾಗಿದ್ದು, ಸದರಿ ತಾತ್ಕಾಲಿಕ ನೇಮಕಾತಿ ಪಟ್ಟಿಯನ್ನು .. ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು (ಗ್ರಾ) ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

 

ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 2 ರಂದು ಸಂಜೆ 5.30 ರೊಳಗಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಕಚೇರಿಗೆ ಆಕ್ಷೇಪಣೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ . ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು, ದೂರವಾಣಿ ಸಂಖ್ಯೆ 0824 2263199 ಸಂಪರ್ಕಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಂಗಳೂರು ಗ್ರಾಮಾಂತರ ಇವರ ಪ್ರಕಟಣೆ ತಿಳಿಸಿದೆ.

Also Read  ಬಂಟ್ವಾಳ: ಗೋಮಯದಿಂದ ಹಣತೆ ತಯಾರಿಸಿದ ಕಾಲೇಜು ವಿದ್ಯಾರ್ಥಿಗಳು

error: Content is protected !!
Scroll to Top