ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ

(ನ್ಯೂಸ್ ಕಡಬ) newskadaba.com ಬಾಳಿಲ. ಆ,27:  ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ವಂದ್ರ ಬಾಳಿಲ ರವರು ದೈವಾನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

 

 

ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಡಿ.ಸಿ ಸರ್ ಎಂದೇ ವಿದ್ಯಾರ್ಥಿ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ಚಂದ್ರರವರ ನಿಧನ ಅವರ ಕುಟುಂಬ ಹಾಗೂ ಆಪ್ತವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಇನ್ನು ಇವೆ ಪಾರ್ಥಿವ ಶರೀರದ ಅಂತ್ಯ ಕ್ರಿಯೆ ಪುತ್ತೂರಿನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.

 

Scroll to Top