(ನ್ಯೂಸ್ ಕಡಬ) newskadaba.com ಚಾಮರಾಜನಗರ, ಆ. 27. ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ.ಪಾಳ್ಯ ಎಂಬಲ್ಲಿ ವಿದ್ಯುತ್ ಪ್ರವಹಿಸಿ ಗಂಡಾನೆಯೊಂದು ಸಾವನ್ನಪ್ಪಿದೆ.
ಬೆಳೆಯ ರಕ್ಷಣೆಗೆಂದು ರೈತರೋರ್ವರು ತಮ್ಮ ಜಮೀನಿಗೆ ತಂತಿಬೇಲಿ ಅಳವಡಿಸಿ, ಅದಕ್ಕೆ ಅಕ್ರಮವಾಗಿ ವಿದ್ಯುತ್ ಸಂಪರ್ಕವನ್ನೂ ನೀಡಿದ್ದರು ಎನ್ನಲಾಗಿದೆ. ಆನೆಯ ವಯಸ್ಸು 28-30 ವರ್ಷ ಇರಬಹುದು ಎಂದು ಅರಣ್ಯಾಧಿಕಾರಿಗಳು ಅಂದಾಜಿಸಲಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.