ಕಾಸರಗೋಡು- ಕರ್ನಾಟಕ ಗಡಿ ರಸ್ತೆ ತೆರವುಗೊಳಿಸಲು ಕೇರಳ ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,27:  ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ- ಕಾಸರಗೋಡು ನಡುವಿನ 14ಕ್ಕೂ ಅಧಿಕ ರಸ್ತೆಗಳನ್ನು ಮಣ್ಣು ಹಾಕಿ ಬಂದ್ ಮಾಡಲಾಗಿತ್ತು. ಇದರಿಂದಾಗಿ ಉಭಯ ಜಿಲ್ಲೆಗಳ ನಡುವಿನ ಸಂಪರ್ಕ ಸ್ಥಗಿತಗೊಂಡಿತ್ತು. ಈ ನಡುವೆ ಕೇಂದ್ರ ಸರಕಾರ ಅನ್ ಲಾಕ್ ಮಾರ್ಗಸೂಚಿ 3.0 ಪ್ರಕಾರ ಜನಸಂಚಾರಕ್ಕೆ ಯಾವುದೇ ನಿರ್ಬಂಧ ಹೇರಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ಕೇರಳ ಸರಕಾರ ಮಾತ್ರ ರಸ್ತೆ ಸಂಚಾರ ಬಂದ್ ಮಾಡಿತ್ತು.

 

ಈ ಕಾರಣದಿಂದ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಕೇರಳ ಹೈಕೋರ್ಟ್ ಗೆ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೇರಳ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ. ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳುವ ಜಾಲ್ಸೂರು, ಪಾಣತ್ತೂರು, ಮಾಣಿಮೂಲೆ ಮತ್ತು ಸಾರಡ್ಕ ರಸ್ತೆಗಳನ್ನು ತೆರವುಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

Also Read  ದೂರವಾಣಿ ಕರೆಮಾಡಿ ಜೀವಬೆದರಿಕೆ- ದೂರು ದಾಖಲು

 

error: Content is protected !!
Scroll to Top