ಅನ್ನ ಭಾಗ್ಯದ ಅಕ್ಕಿಗೆ ಖದೀಮರಿಂದ ಕನ್ನ ➤ ಪಡಿತರ ಅಕ್ಕಿ ದಾಸ್ತಾನು, ಆರೋಪಿಗಳು ಪೋಲಿಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕುಂದಾಪುರ . ಆ,28:  ಸರಕಾರ ಬಡತನ ರೇಖೆಗಿಂತ ಕೆಳಗಿರುವವರಿಗೆ ಉಚಿತವಾಗಿ ವಿತರಿಸುವ ಅನ್ನಭಾಗ್ಯದ ಅಕ್ಕಿಗೆ ಕನ್ನ ಹಾಕಿದ ಘಟನೆ ಕುಂದಾಪುರ ತಾಲೂಕು ಕೋಟೇಶ್ವರದಲ್ಲಿ ನಡೆದಿದೆ. ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಕ್ರಮವಾಗಿ ಸುಮಾರು 55 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೋಲಿಸರು ಪಡೆದಿದ್ದಾರೆ.

 

ಪ್ರಕರಣಕ್ಕೆ ಸಂಬಂಧಿಸಿದಂತೆ  ಖದೀಮರನ್ನ ಬಂಧಿಸಲಾಗಿದೆ. ಖದೀಮರು ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನಿರಿಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಸ್ಮಾಯಿಲ್ ಬ್ಯಾರಿ, ಮುಸ್ತಫಾ ತೌಫಿಕ್, ಉಬೇದುಲ್ಲಾ, ಮಹಮ್ಮದ್ ಮೇಚ್ರಾ, ನಿಯಾಸ್ ಬಂಧಿತ ಆರೋಪಿಗಳಾಗಿದ್ದಾರೆ. ಇನ್ನು ಆರೋಪಿಗಳು ಅಕ್ರಮವಾಗಿ ಗೋದಾಮಿನಲ್ಲಿ ದಾಸ್ತಾನಿರಿಸಿದ್ದ 55 ಟನ್ ಅಕ್ಕಿ ವಶಕ್ಕೆ ಪಡೆಯಲಾಗಿದೆ. ಕಾರ್ಯಾಚರಣೆಯಲ್ಲಿ 2.75 ಲಕ್ಷ ನಗದು ವಶಕ್ಕೆ ಪಡೆಯಲಾಗಿದೆ. ಅಲ್ಲದೆ, ಲಾರಿ ಸೇರಿ ಒಟ್ಟು ಒಂದು ಕೋಟಿ ರುಪಾಯಿ ಸೊತ್ತು ವಶಕ್ಕೆ ಪಡೆಯಲಾಗಿದೆ.ಉಚಿತ ಅಕ್ಕಿ ಪಾಲಿಶ್ ಮಾಡಿ ಸೋನ ಮಸೂರಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಉಡುಪಿಯ ಡಿಸಿಐಬಿ ಪೊಲೀಸರ ಕಾರ್ಯಾಚರಣೆ ನಡೆಸಿದ್ದಾರೆ.

Also Read  ವೀರಮಂಗಲ: ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ

 

error: Content is protected !!
Scroll to Top