ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.

 

ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೃತಪಟ್ಟರು. ಇವರು ಪತ್ನಿ ಮತ್ತು ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮಂಗಳೂರು ವಕೀಲ ಸಂಘದ ಸದಸ್ಯರಾಗಿದ್ದ ಇವರ ಅಂತ್ಯ ಸಂಸ್ಕಾರವು ಶನಿವಾರ ಹುಟ್ಟೂರಲ್ಲಿ ನಡೆಯಲಿದೆ ಎಂದು ವಕೀಲರ ಸಂಘದ ಪ್ರಧಾನ‌ ಕಾರ್ಯದರ್ಶಿ ತಿಳಿಸಿದ್ದಾರೆ.

Also Read  ಹಿರಿಯ ಪತ್ರಕರ್ತ ಮಿತ್ತೂರು ಹಾಜಿ ಹಮೀದ್ ಕಂದಕ್ ನಿಧನ

 

error: Content is protected !!
Scroll to Top