ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರು ರಕ್ಷಣೆ ➤ ನಾಲ್ವರು ಆರೋಪಿಗಳು ಪೋಲಿಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಪೊನ್ನಂಪೇಟೆ. ಆ,28:  ಕೇರಳದ ಕೊಲ್ಲಂಗೆ ಕೋಣಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಗಡಿಭಾಗ ಕುಟ್ಟ ಚೆಕ್‌ಪೋಸ್ಟ್ ಬಳಿ ಪೊಲೀಸರು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ.

ಲಾರಿಯಲ್ಲಿ ಸಾಗಿಸುತ್ತಿದ್ದ 24ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಿದ್ದಾರೆ. ಕೊಲ್ಲಂ ನಿವಾಸಿ ನಿಜಾಮ್, ಮಧ್ಯಪ್ರದೇಶದ ಭೂಪಾಲ್‍ನ ಶಾನು, ಫೈಜಾನ್, ಮೊಹಮದ್ ರಫೀ ಎಂಬ ಆರೋಪಿಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ. ಸಿಪಿಐ ಪರಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಕುಟ್ಟ ಪಿಎಸ್‌ಐ ಎಚ್.ಜೆ. ಚಂದ್ರಪ್ಪ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡರು.

Also Read  ಗಂಡು ಮಗುವಿಗಾಗಿ 4 ಹೆಣ್ಣು ಮಕ್ಕಳನ್ನು ಮಾರಾಟಕ್ಕಿಟ್ಟ ಅಪ್ಪ

 

error: Content is protected !!
Scroll to Top