ತುಳುನಾಡಿನ ಧಾರ್ಮಿಕ ಆಚರಣೆಗಳಿಗೆ ಸಿಎಂ ಅನುಮತಿ

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ಕೊರೊನಾದಿಂದಾಗಿ ನಿಂತುಹೋಗಿದ್ದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ಆಚರಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ದೈವಾರಾಧನೆ, ನೇಮೋತ್ಸವ, ಮಾರಿಪೂಜೆ ಮತ್ತಿತರ ಶ್ರದ್ಧಾಭಕ್ತಿಯ ಆಚರಣೆಗಳಿಗೆ ಅನುಮತಿ ಕೋರಿ ಉಡುಪಿ ಶಾಸಕ ರಘುಪತಿ ಭಟ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು ಸಿಎಂ ಅವರು ಅನುಮತಿ ನೀಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ಶಾಸಕ ರಘುಪತಿ ಭಟ್ ಅವರು, ಧಾರ್ಮಿಕ ಆಚರಣೆಗಳನ್ನು ಮುಂದುವರಿಸಲು ಮುಖ್ಯಮಂತ್ರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶಿಸಿದ್ದು ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ ಎಂದಿದ್ದಾರೆ. ಲಾಕ್‍ಡೌನ್ ಹಿನ್ನೆಲೆಯಿಂದ ತುಳುವರ ಧಾರ್ಮಿಕ ಆಚರಣೆಗೆ ಧಕ್ಕೆ ಉಂಟಾಗಿದೆ. ಧಾರ್ಮಿಕ ಸೇವೆಗಳಿಗೆ ನಿಷೇಧ ಹೇರಿದ್ದರಿಂದ ದೈವಾರಾಧಕರ ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟಾಗಿದ್ದಲ್ಲದೆ ನಾಗಸ್ವರ ವಾದಕರು, ಮಡಿವಾಳ, ದರ್ಶನ ಪಾತ್ರಿ, ಮಧ್ಯಸ್ಥರು, ಗರೋಡಿ ವರ್ಗದವವರು, ನಲಿಕೆ ವರ್ಗ, ಪಂಬದ ವರ್ಗದವರು ಸೇರಿ ಸುಮಾರು 600 ಜನರ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಹಿನ್ನೆಲೆ ಈ ಆಚರಣೆಗಳಿಗೆ ಅವಕಾಶ ನೀಡಬೇಕು ಎಂದು ಶಾಸಕ ರಘುಪತಿ ಭಟ್ ಮನವಿ ಸಲ್ಲಿಸಿದ್ದರು.

Also Read  ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..!

error: Content is protected !!