ವಿಕಲಚೇತನರ ವಿವಿಧ ಯೋಜನೆಗಳಿಗೆ ಅರ್ಜಿಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. 2020-21ನೇ ಸಾಲಿನಲ್ಲಿ  ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲಚೇತನರಿಗೆ ನೀಡುವ ಸೌಲಭ್ಯಗಳಾದ ವಿದ್ಯಾರ್ಥಿವೇತನ, ಪ್ರತಿಭಾವಂತ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುವ ವಿಕಲಚೇತನರಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್, ಸಾಧನ ಸಲಕರಣೆಗಳು, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ, ಸಾಧನೆ ಮತ್ತು ಪ್ರತಿಭೆ, ವಿವಾಹ ಪ್ರೋತ್ಸಾಹಧನ, ಶಿಶು ಪಾಲನಾ ಭತ್ಯೆ, ನಿರುದ್ಯೋಗ ಭತ್ಯೆ, ಸ್ಪರ್ಧಾಚೇತನ, ಯಂತ್ರಚಾಲಿತ ದ್ವಿಚಕ್ರವಾಹನ ಮತ್ತು ಆಧಾರ ಯೋಜನೆಗಳಿಗೆ  ಅರ್ಜಿ ಆಹ್ವಾನಿಸಿದೆ.

ಅರ್ಜಿಯನ್ನು ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಗೆ ಅಥವಾ ತಾಲ್ಲೂಕಿನ  ವಿವಿಧ್ದೋದ್ದೇಶ ಪುನರ್ವಸತಿ ಕಾರ್ಯಕರ್ತರಲ್ಲಿ ಅಥವಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಯವರ ಕಚೇರಿ, ವೆಬ್‍ಸೈಟ್ www.dwdsc.kar.nic.in ಅಥವಾ ದೂರವಾಣಿ ಸಂಖ್ಯೆ: 0824-2458173, 2455999 ಸಂಪರ್ಕಿಸುವಂತೆ  ದ.ಕ. ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Also Read  ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

error: Content is protected !!
Scroll to Top