(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ದಿನಾಂಕ 19.12.2019 ರಂದು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನೆಯ ಸಮಯದಲ್ಲಿ ಗುಂಡೇಟಿನಿಂದ ನೌಶಿನ್ ಹಾಗೂ ಜಲೀಲ್ ಕುದ್ರೋಳಿ ಎಂಬವರು ಮೃತಪಟ್ಟಿರುವ ಬಗ್ಗೆ ಮ್ಯಾಜಿಸ್ಟೀರಿಯಲ್ ವಿಚಾರಣೆ ನಡೆಸಲು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ, ಉಡುಪಿ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿರುತ್ತದೆ.

ಈ ಸಂಬಂಧ ಸದ್ರಿ ದಿನ ಈ ಘಟನೆ ಬಗ್ಗೆ ಮಾಹಿತಿಯುಳ್ಳ ಅಥವಾ ಈ ಘಟನೆಯನ್ನು ಪ್ರತ್ಯಕ್ಷವಾಗಿ ನೋಡಿದ ಯಾವುದೇ ವ್ಯಕ್ತಿಗಳು ಸೆಪ್ಪೆಂಬರ್ 1 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಸಹಾಯಕ ಆಯುಕ್ತರ ಕೋರ್ಟ್ ಹಾಲ್, ಮಿನಿ ವಿಧಾನ ಸೌಧ, ಮಂಗಳೂರು, ಇಲ್ಲಿಗೆ ಹಾಜರಾಗಿ ಸಾಕ್ಷ್ಯ ಅಥವಾ ಹೇಳಿಕೆಯನ್ನು ನೀಡಲು ಅಂತಿಮ ಅವಕಾಶವನ್ನು ನೀಡಲಾಗಿದೆ. ತದನಂತರ ಸಾರ್ವಜನಿಕರಿಂದ ಯಾವುದೇ ಸಾಕ್ಷ್ಯ ಅಥವಾ ಹೇಳಿಕೆಯನ್ನು ಸ್ವೀಕರಿಸಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಪ್ರಕಟಣೆ ತಿಳಿಸಿದೆ.
