ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.

2008ರಲ್ಲಿ ಡಿಎಆರ್ ಗೆ ಸೇರಿ ತದನಂತರ ನಾಗರಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಹನುಮಂತಪ್ಪ ಇತ್ತೀಚೆಗೆ ಬಡಗನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

error: Content is protected !!
Scroll to Top