ದ್ರೋಣಾಚಾರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ತುಳುನಾಡಿನ ಅತ್ಲೆಟಿಕ್ ಕೋಚ್ ಸೂತ್ರಬೆಟ್ಟು ಪುರುಷೋತ್ತಮ್ ರೈ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29.  ದೇಶದ ಪ್ರತಿಷ್ಠಿತ ಪ್ರಶಸ್ತಿಗಳ ಪೈಕಿ  ದ್ರೋಣಾಚಾರ್ಯ ಪ್ರಶಸ್ತಿಗೆ ದಕ್ಷಿಣ ಕನ್ನಡದ ಪುತ್ತೂರಿನ ಸೂತ್ರಬೆಟ್ಟು ಮನೆತನದ ಪುರುಷೋತ್ತಮ್ ರೈ ಆಯ್ಕೆಯಾಗಿ  ಇಂದು ಪ್ರಶಸ್ತಿ ವಿತರಣೆಯ ಖುಷಿಯಲ್ಲಿರುವಾಗಲೇ ಇವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರಶಸ್ತಿ ವಿತರಣೆಯ ಸಂತಸದಲ್ಲಿರುವಾಗಲೇ ವಿಧಿಯಾಟವೇ ಬೇರೆಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಂದು ಪುರುಷೋತ್ತಮ್ ರೈ ತನ್ನ ಜೀವಮಾನದ ಸಾಧನೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಬೇಕಿತ್ತು. ಆದರೆ ಅದಕ್ಕೆ ಒಂದು ದಿನ ಇರುವಾಗಲೇ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.  ಕಳೆದ 35 ವರ್ಷಗಳ ಕಾಲ ರಾಜ್ಯದ ಅಥ್ಲೀಟ್‌ಗಳಿಗೆ ತರಬೇತಿ ನೀಡಿದ್ದ ಇವರು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ಶನಿವಾರ ಬೆಂಗಳೂರಿನ ಸಾಯ್ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ವರ್ಚುವಲ್ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿ ಸಮಾರಂಭದಲ್ಲಿ ಅವರು ಮಾಡಿದಂತಹ ಸಾಧನೆಗಾಗಿ ದ್ರೋಣಾಚಾರ್ಯ ಪ್ರಶಸ್ತಿ ಸ್ವೀಕರಿಸಬೇಕಿತ್ತು.

Also Read  ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯಿಂದ ಭಾಷಣ

error: Content is protected !!
Scroll to Top