ಮೂವರು ಉಗ್ರರನ್ನು ಸದೆಬಡಿದ ಭಾರತೀಯ ಸೇನೆ ➤ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ, ಆ. 29. ಪುಲ್ವಾಮಾದ ಝಾದೂರ ಎಂಬ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ನಡೆದ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯು ಮೂವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರ ಮಾಹಿತಿ ತಿಳಿದ ಭದ್ರತಾ ಪಡೆಗಳು ಝಾದೂರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಉಗ್ರರ ಗುಂಡಿನ ದಾಳಿಗೆ ಓರ್ವ ಯೋಧ  ಹುತಾತ್ಮನಾಗಿದ್ದು, ಇದಕ್ಕೂ ಮುನ್ನ ನಿನ್ನೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.

Also Read  ವಿಟ್ಲ: ಅಟೋ ರಿಕ್ಷಾದಲ್ಲಿ ಅಕ್ರಮ ಗೋಮಾಂಸ ಸಾಗಾಟ ➤ 30 ಕೆಜಿ ಮಾಂಸದ ಸಹಿತ ಅಟೋ ರಿಕ್ಷಾ ವಶಕ್ಕೆ

 

error: Content is protected !!
Scroll to Top