(ನ್ಯೂಸ್ ಕಡಬ) newskadaba.com ಕೊಡಗು, ಆ. 30. ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾದಕ ವಸ್ತುಗಳನ್ನು ಸರಬರಾಜು ಮಾಡಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವ ಕಾರ್ಯಾಚರಣೆಯಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಪರಾಧ ಪತ್ತೆ ದಳ ಯಶಸ್ವಿಯಾಗಿದೆ.
ಮಡಿಕೇರಿ ಗ್ರಾಮಾಂತರ ಪಿ.ಎಸ್.ಐ. ರವರ ನೇತೃತ್ವದ ತಂಡವು ಮಾದಕ ವಸ್ತು ಸರಬರಾಜಿನ ಬಗ್ಗೆ ಖಚಿತ ಮಾಹಿತಿ ಕಲೆ ಹಾಕಿ ಮಡಿಕೇರಿ ನಗರ ವ್ಯಾಪ್ತಿಯಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ವೇಳೆ ಟಾಟಾ ಇಂಡಿಕಾ ಕಾರು ಮತ್ತು ಮಾರುತಿ ಸ್ವಿಫ್ಟ್ ವಾಹನವನ್ನು ತಡೆದು ಪರಿಶೀಲಿಸುತ್ತಿರುವ ವೇಳೆ ಎರಡು ವಾಹನದಲ್ಲಿದ್ದಆರೋಪಿಗಳು ಓಡಿ ಹೋಗಲು ಪ್ರಯತ್ನಿಸಿದ್ದು, ಅವರುಗಳ ಪೈಕಿ ಟಾಟಾ ಇಂಡಿಕಾ ಕಾರಿನಲ್ಲಿದ್ದ ಮೂರು ಜನ ಆರೋಪಿಗಳನ್ನು ವಶಕ್ಕೆ ಪಡೆದು ಆರೋಪಿಗಳಿಂದ ಸುಮಾರು 300 ಗ್ರಾಂ ನಷ್ಟು ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.