ಅಕ್ರಮ ಕಸಾಯಿ ಖಾನೆ ಮೇಲೆ ಭಜರಂಗದಳ ಕಾರ್ಯಕರ್ತರ ದಾಳಿ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 30. ತಾಲೂಕಿನ ಬಂಗಾಡಿಯ ಓಟೆದಕಜೆ ಮನೆಯೊಂದರಲ್ಲಿ ದನದ ಮಾಂಸ ಮಾಡುತ್ತಿದ್ದ ಖಚಿತವಾದ ಮಾಹಿತಿ ಪಡೆದು ದಾಳಿ ನಡೆಸಿದ ಭಜರಂಗದಳ ಕಾರ್ಯಕರ್ತರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಸುನಿಲ್, ವರ್ಗೀಸ್, ವಿನೋದ್, ಕೆ.ಡಿ. ಜೋಸೆಫ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಸುಮಾರು 40 ರಿಂದ 50 ಕೆ.ಜಿ ಮಾಂಸ ಹಾಗೂ ಒಂದು ಜೀಪ್ ಅನ್ನು ವಶಪಡಿಸಿಕೋಡು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಲಾಗಿದೆ.  ಈ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Scroll to Top