ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದೆ.

ಈ ಬಗ್ಗೆ ಟ್ವೀಟ್ ಮಾಡಿ ಅವರು “ನಾನು ಕೊರೋನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯು ಪಾಸಿಟಿವ್ ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ” ಎಂದು ಮನವಿ ಮಾಡಿದ್ದಾರೆ.

Also Read  ಶಾಲಾ ಬಾಲಕಿಗೆ ಸ್ಪ್ರೇ ಸಿಂಪಡಿಸಿದ ಪ್ರಕರಣ ➤ಶಾಲೆಯಿಂದ ತಪ್ಪಿಸಿಕೊಳ್ಳಲು ನಾಟಕವಾಡಿದ ವಿದ್ಯಾರ್ಥಿನಿ

error: Content is protected !!