ಪುತ್ತೂರು: ಕಾರು ಬೈಕ್ ನಡುವೆ ಭೀಕರ ಅಪಘಾತ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 31. ನರಿಮೊಗರು ಶಾಲೆಯ ಬಳಿ ಆಗಸ್ಟ್ 30ರ ರಾತ್ರಿ ಬೈಕ್ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರೂ ಮೃತಪಟ್ಟ ಘಟನೆ ವರದಿಯಾಗಿದೆ.

ಮೃತರನ್ನು ಮಿಥುನ್(18)ಹಾಗೂ ಭವಿತ್ (19) ಎಂದು‌ ಗುರುತಿಸಲಾಗಿದೆ. ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಹೋದರರು ಹಿಂತಿರುಗುತ್ತಿದ್ದವೇಳೆ ಈ ಅವಘಢ ಸಂಭವಿಸಿದೆ. ಮೃತ ಮಿಥುನ್ ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಇವರು ಬರುತ್ತಿದ್ದ ಬೈಕ್ ಹಾಗೂ ಕಾರಿನ ಮಧ್ಯೆ ಅಪಘಾತವಾಗಿದೆ. ತಲೆಗೆ ತೀವ್ರ ಗಾಯಗೊಂಡಿದ್ದರಿಂದ ಸವಾರರಿಬ್ಬರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Also Read  ಮನೆಯಲ್ಲಿ ಆಕಸ್ಮಿಕ ಬೆಂಕಿ             ➤ ದಂಪತಿ ಸಜೀವ ದಹನ...!

ಮೃತದೇಹಗಳನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top