ಸುಧಾರಣೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

 

84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದಾರೆ. ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿದೆ. ನಾವು ಎಷ್ಟೇ ಪ್ರಯತ್ನಿಸದರೂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಸೇನಾ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.

 

Scroll to Top