ಮಂತ್ರಾಲಯದಲ್ಲಿ ಅಗ್ನಿ ಅವಘಡ ► 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಸುಟ್ಟು ಭಸ್ಮ!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ.18,: ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಕಸ್ಮಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಅಂಗಡಿಗಳು ಸುಟ್ಟು ಸುಮಾರು 50 ಲಕ್ಷ ರೂ. ಹೆಚ್ಚು ಮೌಲ್ಯದ ವಸ್ತುಗಳು ಹಾನಿಯಾಗಿದೆ.

ರಾಘವೇಂದ್ರ ಸ್ವಾಮಿ ಮಠದ ಬಳಿ ಶಾರ್ಟ್ ಸರ್ಕ್ಯೂಟ್‍ನಿಂದ ಈ ಘಟನೆ ನಡೆದಿದ್ದು, 5 ಅಂಗಡಿಗಳು ಹೊತ್ತಿ ಉರಿದಿವೆ. ತುಂಗಭದ್ರಾ ನದಿ ತೀರದಲ್ಲಿರುವ ಪೂಜೆ ಸಾಮಗ್ರಿ, ಆಟಿಕೆ ಅಂಗಡಿಗಳು ಬೆಂಕಿಗಾಹುತಿಯಾಗಿವೆ.

ಗುರು, ಭೀಮಣ್ಣ, ಜಗಂ ಮಹೇಶ್, ಆದಿ, ಬಂದೇಜಿ ರಾವ್ ಎಂಬವರಿಗೆ ಸೇರಿದ ಅಂಗಡಿಗಳು ಭಸ್ಮವಾಗಿವೆ. ಮಂತ್ರಾಲಯ ಶ್ರೀ ಸುಬುಧೇಂದ್ರ ತೀರ್ಥರು ಸ್ಥಳ ಪರಿಶೀಲನೆ ನಡೆಸಿದ್ದು ವ್ಯಾಪಾರಿಗಳ ಸಹಾಯಕ್ಕೆ ಮುಂದಾಗಿದ್ದಾರೆ.

Also Read  ವಿಶೇಷ ಲೇಖನ- "ಶಿಕ್ಷಣ ಸೊರಗದಿರಲಿ, ಶಿಕ್ಷಕ ಬಲಿಷ್ಠನಾಗಲಿ" ಡಾ. ಮುರಲೀ ಮೋಹನ ಚೂಂತಾರು

ಘಟನೆಗೆ ಸಂಬಂಧಿಸಿದಂತೆ ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

error: Content is protected !!
Scroll to Top