ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ . ಆ,31:  ವಿದೇಶದಿಂದ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ವಿಮಾನ ನಿಲ್ದಾಣದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ 28 ವರ್ಷದ ಲೀಜಾ ಜೋಸ್ ಮೃತ ವಿದ್ಯಾರ್ಥಿನಿ. ಲೀಸಾ ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕೊರಿಯದ ಪುಸಾನ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದರು.

 

ಕೇರಳಕ್ಕೆ ವಾಪಸ್ ಬರಲೆಂದು ಲೀಸಾ, ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಲೀಸಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಷ್ಟರಲ್ಲೇ ಲೀಜಾ ಜೋಸ್ ಮೃತಪಟ್ಟಿದ್ದರು. ಲೀಸಾ ಅನಾರೋಗ್ಯದಿಂದ ಬಳಲುತ್ತಿದ್ದರು. ಕಳೆದ ಫೆಬ್ರವರಿಯಲ್ಲಿ ಕೇರಳಕ್ಕೆ ಬಂದಿದ್ದಾಗ ಕ್ಯಾನ್ಸರ್ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ತಾನು ಮಾಡಿದ ಪ್ರಾಜೆಕ್ಟ್ ಗಳನ್ನು ವಿಶ್ವ ವಿದ್ಯಾಲಯಕ್ಕೆ ಸಬ್ ಮಿಟ್ ಮಾಡಬೇಕು. ಇಲ್ಲವಾದಲ್ಲಿ ಸಂಶೋಧನೆ ವ್ಯರ್ಥವಾಗುತ್ತದೆ ಎಂದು ಮತ್ತೆ ದಕ್ಷಿಣ ಕೊರಿಯಾಗೆ ತೆರಳಿದ್ದರು. ಮಗಳ ಆರೋಗ್ಯ ಕ್ಷೀಣಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಮನೆಗೆ ಬರುವಂತೆ ಹೇಳಿದ್ದರು. ಈ ಹಿನ್ನಲೆಯಲ್ಲಿ ಲೀಸಾ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದರು. ಆದರೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲೇ ಲೀಸಾ ಮೃತಪಟ್ಟಿದ್ದಾರೆ.

Also Read  ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

error: Content is protected !!
Scroll to Top