ಮಂಗಳೂರು: ಅತಿಥಿ ಶಿಕ್ಷಕರನ್ನು ಕಾಯಂ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31.  ಅತಿಥಿ ಶಿಕ್ಷಕರು ಕೊರೋನಾ ಸಂಕಷ್ಟದಿಂದಾಗಿ ಉದ್ಯೋಗವಿಲ್ಲದೇ ತತ್ತರಿಸಿ ಹೋಗಿದ್ದು, ಕೂಡಲೇ ಅತಿಥಿ ಶಿಕ್ಷಕರನ್ನು ಕಾಯಂ ಮಾಡಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಅತಿಥಿ ಶಿಕ್ಷಕರು ಇಲ್ಲಿನ ಮಿನಿ ವಿಧಾನಸೌಧದ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಸಮಾಜ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕರ ನೇಮಕಾತಿಯಲ್ಲಿ ಅರೆಕಾಲಿಕ ಶಿಕ್ಷಕರು ಹಾಗೂ ಅತಿಥಿ ಶಿಕ್ಷಕರಿಗೆ ಆದ್ಯತೆ ನೀಡುವ ರೀತಿಯಲ್ಲಿ ಶಾಲಾ ಶಿಕ್ಷಕರ ನೇಮಕಾತಿಯಲ್ಲೂ ನಮಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ, ಕೋವಿಡ್ ವಿಶೇಷ ಪ್ಯಾಕೇಜ್ ನೀಡಬೇಕು, 12 ತಿಂಗಳ‌ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು.

Also Read  87 ನೇ ಕನ್ನಡ ಸಾಹಿತ್ಯ ಸಮ್ಮೇಳನ; ಮಾನ್ಯ ಮುಖ್ಯಮಂತ್ರಿಯವರಿಂದ ಉದ್ಘಾಟನೆ

error: Content is protected !!
Scroll to Top