ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಸೆಪ್ಟೆಂಬರ್ 30ರ ವರೆಗೆ ನಿರ್ಬಂಧ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 31.  ಕೊರೋನಾ ವೈರಸ್ ಹಿನ್ನೆಲೆಯಿಂದಾಗಿ ಐದು ತಿಂಗಳಿಂದ ಅಂತರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಸೆಪ್ಟೆಂಬರ್ 30ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ(ಡಿಜಿಸಿಎ) ಇಂದು ಅಧಿಸೂಚನೆ ಹೊರಡಿಸಿದೆ.

ಈ ನಿರ್ಬಂಧವೂ ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟೀಕರಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ಮಾರ್ಚ್ 25ರಂದು ಪ್ರಧಾನಿಯವರು ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲು ಆದೇಶ ನೀಡಿದ್ದರು. ಮೇ 25ರಿಂದ ದೇಶೀಯ ವಿಮಾನ ಹಾರಾಟ ಆರಂಭವಾದರೆ, ಅಂತರಾಷ್ಟ್ರೀಯ ವಿಮಾನ ಹಾರಾಟವನ್ನು ಮುಂದೂಡಲಾಗಿತ್ತು. ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ವಾಪಸ್ ಕರೆತರಲು ವಂದೇ ಭಾರತ್ ಮಿಷನ್ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಿದೆ.

Also Read  ನಾಳೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂಸವಾರಿ

error: Content is protected !!
Scroll to Top