(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. 2019- 20ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಅರ್ಜಿ ಆಹ್ವಾನಿಸಲಾಗಿದೆ.
ಕೋರ್ಸ್ ವಿವರ ಇಂತಿವೆ:- ಜೂನ್-ಜುಲೈ 2020 ನೇ ಮಾಹೆಯಲ್ಲಿ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಶೇ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ. 7 ಸಾವಿರ, ಶೇ.75ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ರೂ. 15 ಸಾವಿರ. 2020-21ನೇ ಸಾಲಿನ ಆಯವ್ಯಯ ಘೋಷಣೆಯಂತೆ ಸ್ವಾತಂತ್ರ್ಯ ಹೋರಾಟದ ಭಾಗವಾದ ಹಲಗಲಿ ಬೇಡರ ಬಂಡಾಯದಲ್ಲಿ ಹುತಾತ್ಮರಾದ ಜಡಗ ಮತ್ತು ಬಾಲ ಇವರ ಹೆಸರಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಮತ್ತು ನಗದು ರೂ.1. ಲಕ್ಷ ನೀಡಲಾಗುತ್ತದೆ. (ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ). ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಸ್ನಾತಕೋತ್ತರ ಪದವಿಯಲ್ಲಿ 1 ರಿಂದ 5 ನೇ ರ್ಯಾಂಕ್ ಪಡೆದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ರೂ. 50 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇಲಾಖೆಯ www.sw.kar.nic.in ವೆಬ್‍ಸೈಟ್‍ನಲ್ಲಿ ಅಪ್ಲೋಡ್ ಮಾಡಲಾದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಂಡು ಅಜಿಯನ್ನು ಭರ್ತಿಮಾಡಿ ದೃಢೀಕೃತ ದಾಖಲೆಗಳೊಂದಿಗೆ ಅರ್ಜಿಗಳನ್ನು ಕೇಂದ್ರ ಕಾರ್ಯಾಲಯ ಬೆಂಗಳೂರು ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ತಾಲೂಕು, ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದು.
ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಹಾಗೂ ಅರ್ಹತೆಗಳನ್ನು ಹೊಂದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ವೆಬ್ ಸೈಟ್ www.sw.kar.nic.in ನಲ್ಲಿ ಪಡೆಯಬಹುದು. ಅರ್ಜಿಗಳನ್ನು ಆನ್ ಲೈನ್ ನಲ್ಲಿ ಸಲ್ಲಿಸಿದ ನಂತರ ಅದರ ದೃಢೀಕೃತ ಪ್ರತಿಯನ್ನು ಎಲ್ಲಾ ದಾಖಲೆಗಳ ಸಮೇತ ಆಯಾ ತಾಲೂಕುಗಳ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕಚೇರಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಅಥವಾ ದೂರಾವಾಣಿ ಸಂಖ್ಯೆ: 0824-2451237 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.