(ನ್ಯೂಸ್ ಕಡಬ) newskadaba.com ಮಂಗಳೂರು, ಆ. 31. ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಕ್ಕೆ ಸರ್ಕಾರಿ ಆಸ್ಪತ್ರೆಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಗೆ ಮಾದರಿಯನ್ನು ಕಳುಹಿಸಿದರೆ ಅದರ ಮೊತ್ತ ರೂ 1,500 ನಿಗದಿಯಾಗಿರುತ್ತದೆ. ಇದರಲ್ಲಿ ಸ್ಕ್ರೀನಿಂಗ್, ದೃಢೀಕರಣ ಪರೀಕ್ಷೆ ಜೊತಗೆ ಪಿಪಿಇ ಕಿಟ್ ಮೊತ್ತವು ಒಳಗೊಂಡಿರುತ್ತದೆ. ಖಾಸಗಿ ಆಸ್ಪತ್ರೆಗಳ ಪ್ರಯೋಗಾಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಮೊತ್ತ ರೂ 2,500 ನಿಗದಿಯಾಗಿರುತ್ತದೆ. ಈ ಮೊತ್ತದಲ್ಲಿ ಪಿಪಿಇ ಕಿಟ್ ದರವೂ ಒಳಗೊಂಡಿರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.
ಕೋವಿಡ್ ಪರೀಕ್ಷೆಗೆ ದರ ನಿಗದಿ
