ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ.

ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Scroll to Top