ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರ ಗುಣಮುಖರಾಗಲು ಬಿಜೆಪಿ ದ. ಕ ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು.

ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಂಪತಿ ದೇವಸ್ಥಾನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ದೇವಲಯ, ಶ್ರೀ ಬ್ರಹ್ಮಬೈದ್ಯರ್ಕಳ ಕ್ಷೇತ್ರ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಪ್ರಾರ್ಥನೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರಿಗೆ ಕೋವೀಡ್ 19 ಸೋಂಕು ದೃಢಪಟ್ಟು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆದ್ದರಿಂದ ಶಾಸಕರು ಬಿಜೆಪಿಯ ಪ್ರಮುಖರಿ ಹಾಗೂ ಕಾರ್ಯಕರ್ತರೆಲ್ಲ್ರೂ ನಗರದ ಪ್ರಮುಖ ದೇವಾಲಯಗಳಲ್ಲಿ ಅವರು ಶೀಘ್ರ ಗುಣಮುಖರಾಗಲು ಭಕ್ತಿಯಿಂದ ಪ್ರಾರ್ಥನೆ ಮಾಡಿದ್ದೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಆನೇಕರು ಉಪಸ್ಥಿತರಿದ್ದರು.

Also Read  ರಾಜ್ಯದ ಹಲವು ಹೆದ್ದಾರಿ ಅಭಿವೃದ್ಧಿ       ➤ ನಿತಿನ್‌ ಗಡ್ಕರಿ

 

 

 

error: Content is protected !!
Scroll to Top