(ನ್ಯೂಸ್ ಕಡಬ) ಮಂಗಳೂರು, ಸೆ. 1. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿಕೇಂದ್ರ (ಸಿಡಾಕ್), ಧಾರವಾಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಮತ್ತು ಪರಿಶಿಷ್ಟ ಜಾತಿ, ವರ್ಗ ಅಧ್ಯಯನ ಮತ್ತು ಅಭಿವೃದ್ಧಿ ಟ್ರಸ್ಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಪೆಂಬರ್ 7 ರಿಂದ ಅಕ್ಟೋಬರ್ 6 ರವರೆಗೆ 30 ದಿನಗಳ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ ಫ್ಯಾಶನ್ ಮತ್ತು ಡ್ರೆಸ್‍ಡಿಸೈನಿಂಗ್ ಕುರಿತು ಮಂಗಳೂರಿನ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡ ಸೇವಾ ಕೇಂದ್ರ , ಗಾಂಧೀನಗರ ಇಲ್ಲಿ ಹಮ್ಮಿಕೊಳ್ಳಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ನೆರವೇರಿಸಲಿದ್ದು, ಮುಖ್ಯ ಅತಿಥಿಯಾಗಿ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಭಾಗವಹಿಸಲಿದ್ದಾರೆ. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಜಂಟಿ ನಿರ್ದೇಶಕ ಅರವಿಂದ ಡಿ. ಬಾಳೇರಿ ಅಧ್ಯಕ್ಷತೆ ವಹಿಸಲಿದ್ದಾರೆ.