ಪ.ಜಾತಿ, ಪ. ಪಂಗಡ – ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಡಾ|| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಪರಿಶಿಷ್ಟ ಜಾತಿಯ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ  ಸಮುದಾಯಗಳ ಅಭಿವೃದ್ಧಿ ಕೋಶ, ಪರಿಶಿಷ್ಟ ಪಂಗಡದ ಅರಣ್ಯ ಆಧಾರಿತ ಆದಿವಾಸಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತಿಸೂಕ್ಷ್ಮಸಮುದಾಯಗಳ ಅಭಿವೃದ್ಧಿ ಕೋಶ ಮತ್ತು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಆರ್ಥಿಕ ಅಭಿವೃದ್ದಿಗಾಗಿ ವಿವಿಧ ಯೋಜನೆಗಳಡಿ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದ್ದು, ಅರ್ಜಿ ಸಲ್ಲಿಸುವ ಕೊನೆಯ ಸೆಪ್ಪೆಂಬರ್ 06 ರವರೆಗೆ ವಿಸ್ತರಿಸಲಾಗಿದೆ.

Also Read  ಅಪಘಾತವನ್ನು ತಪ್ಪಿಸುವ ಭರದಲ್ಲಿ ಕಾವೇರಿ ನದಿಗೆ ಉರುಳಿದ ಕಾರು ► ನಾಲ್ವರು ಅಪಾಯದಿಂದ ಪಾರು

 

ಹೆಚ್ಚಿನ ಮಾಹಿತಿಗಾಗಿ ಡಾ| ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿ.ಹೆಚ್.ಎಸ್.ರಸ್ತೆ, ಜನತಾ ಬಜಾರ್ ಕಟ್ಟಡ, 2ನೇ ಮಹಡಿ, ಮಂಗಳೂರು ಅಥವಾ ದೂರವಾಣಿ ಸಂಖ್ಯೆ:0824-2420114 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

error: Content is protected !!
Scroll to Top