ಪೊಲೀಸ್ ನಿರೀಕ್ಷಕರಿಗೆ ಜೀವ ಬೆದರಿಕೆ ➤ ಅಪ್ರಾಪ್ತ ಬಾಲಕ ಸೇರಿ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.02:  ಸಿಎಎ ಮತ್ತು ಎನ್ ಆರ್ ಸಿ ಪ್ರತಿಭಟನೆ ಸಂದರ್ಭದಲ್ಲಿ ಕದ್ರಿ ಪೊಲೀಸ್ ಇನ್ಸ್ ಪೆಕ್ಟರ್ ಶಾಂತಕುಮಾರ್ ಅವರಿಗೆ ಬೆದರಿಕೆ ಕರೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

 

 

ಮಹಮ್ಮದ್ ಶಾಫಿಕ್ ಹಾಗೂ ಮತ್ತೊಬ್ಬ 17ರ ಹರೆಯದ ಬಾಲಾರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಅಲ್ಲದೆ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ ಸೈಬರ್ ಕ್ರೈಮ್ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸೈಬರ್ ಕ್ರೈಮ್ ಗೆ ವರ್ಗಾವಣೆ ಮಾಡಲಾಗಿದೆ.

Also Read  ನಟ ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ನಿರ್ದೇಶಕ ರಮೇಶ್ ಕಿಟ್ಟಿ ಅರೆಸ್ಟ್

error: Content is protected !!
Scroll to Top