(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.02. ಕೊರೋನಾ ಕಾರಣ ಮುಂದಿಟ್ಟು ನಾಡಹಬ್ಬ ಮೈಸೂರು ದಸರಾ ಆಚರಣೆ ಕೈಬಿಡಬಾರದು ಎಂಬ ಒತ್ತಡದ ನಡುವೆ ಮೈಸೂರು ದಸರಾ ನಡೆಯುವುದೇ ಇಲ್ಲವೇ ಎಂಬ ಸಂದೇಹ ಹೆಚ್ಚಾಗಿದೆ.
ಕಳೆದ ತಿಂಗಳು ಕಾವೇರಿ ನದಿಗೆ ಬಾಗಿನ ಸಮರ್ಪಿಸಲು ತೆರಳುವ ಸಂದರ್ಭದಲ್ಲೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಸರಾ ಆಚರಣೆ ಬಗ್ಗೆ ತೀರ್ಮಾನಿಸಲು ಚಿಂತನೆ ನಡೆದಿದ್ದು, ಶೀಘ್ರವೇ ಸಭೆ ನಡೆಸುವುದಾಗಿ ತಿಳಿಸಿದ್ದರು. ಈ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸೆ.7ರಂದು ಉನ್ನತಮಟ್ಟದ ಸಭೆ ನಿಗದಿಯಾಗಿದೆ ಎಂದು ಮೂಲಗಳು ತಿಳಿಸಿವೆ.
Also Read ಸಾಮಾಜಿಕ ಜಾಲತಾಣ ಬಳಸುವಾಗ ಎಚ್ಚರಿಕೆ ವಹಿಸಿ - ಹ್ಯಾಕರ್ ಗಳ ಬಲೆಗೆ ಸಿಲುಕಿದ ಕಡಬದ ಯುವಕ ಚಂದ್ರಶೇಖರ್ ಮನವಿ