ನೆಲ್ಯಾಡಿ: ಮರದಿಂದ ಬಿದ್ದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ. 02. ಮರದ ಗೆಲ್ಲನ್ನು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಗೋಳಿತ್ತೊಟ್ಟಿನಲ್ಲಿ ಬುಧವಾರದಂದು ನಡೆದಿದೆ.

ಮೃತರನ್ನು ಕೊಣಾಲು ಗ್ರಾಮದ ಕೋಲ್ಪೆ ದರ್ಖಾಸು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇಸ್ಮಾಯಿಲ್ (25ವ.) ಎಂದು ಗುರುತಿಸಲಾಗಿದೆ. ಇವರು ಗೋಳಿತ್ತೊಟ್ಟು ಗ್ರಾಮದ ಅಂಬುಡೇಲು ಎಂಬಲ್ಲಿ ಮಾವಿನ ಮರವೊಂದರ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗೆ ಮೃತಪಟ್ಟಿದ್ದರು ಎನ್ನಲಾಗಿದೆ.

Scroll to Top