ಮಂಗಳೂರು ವಿ.ವಿ – ಅತಿಥಿ ಉಪನ್ಯಾಸಕರ ನೇಮಕಾತಿ

(ನ್ಯೂಸ್ ಕಡಬ) ಮಂಗಳೂರು, ಸೆ. 02. ಮಂಗಳೂರು ವಿಶ್ವವಿದ್ಯಾನಿಲಯ ಆವರಣ ಮಂಗಳಗಂಗೋತ್ರಿ, ಸ್ನಾತಕೋತ್ತರ ಕೇಂದ್ರ ಚಿಕ್ಕಅಳುವಾರ ಇಲ್ಲಿಯ ಸ್ನಾತಕೋತ್ತರ ವಿಭಾಗಗಳಿಗೆ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾಕಾಲೇಜು ಮಂಗಳೂರು, ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಸ್ನಾತಕೋತ್ತರ ಕೋರ್ಸುಗಳಿಗೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು, ವಿಶ್ವವಿದ್ಯಾನಿಲಯ ಸಂಧ್ಯಾಕಾಲೇಜು, ಮಂಗಳೂರು, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು, ಮಡಿಕೇರಿ, ವಿಶ್ವವಿದ್ಯಾನಿಲಯ ಪ್ರಥಮ ದರ್ಜೆ ಕಾಲೇಜು, ಮಂಗಳಗಂಗೋತ್ರಿ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ನೆಲ್ಯಾಡಿ ಇಲ್ಲಿಯ ಪದವಿ ಕೋರ್ಸುಗಳಿಗೆ 2020-21ನೇ ಶೈಕ್ಷಣಿಕ ಸಾಲಿಗೆ ಕೆಳಕಂಡ ವಿಷಯಗಳಲ್ಲಿ ಅತಿಥಿ ಉಪನ್ಯಾಸಕರ ಅವಶ್ಯಕತೆ ಇದೆ.

 

ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಹೊಂದಿರುವ (ಕನಿಷ್ಠ 55% ಅಂಕ) (ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ 50% ಅಂಕಗಳೊಂದಿಗೆ) ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ www.mangaloreuniversity.ac.in ನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಸೆಪ್ಟೆಂಬರ್ 10 ರಂದು ಸಂಜೆ ಗಂಟೆ 5.30 ಗಂಟೆಯೊಳಗೆ ಕುಲಸಚಿವರ ಕಚೇರಿಗೆ ಸಲ್ಲಿಸಬೇಕು.

Also Read  ನೂತನ ಶಿಕ್ಷಣ ನೀತಿಯ ವಿರುದ್ದ ಎನ್.ಎಸ್.ಯು.ಐ ಪ್ರತಿಭಟನೆ

 

ಸ್ನಾತಕೋತ್ತರ ವಿಷಯಗಳು;-  ಇತಿಹಾಸ ಮತ್ತು ಪುರಾತತ್ವಶಾಸ್ತ್ರ ((History and Archaeology), ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಸಮಾಜಕಾರ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂಪರ್ಕ, ದೈಹಿಕ ಶಿಕ್ಷಣ (MPED/BPED), ಭೌತಶಾಸ್ತ್ರ, ಮೆಡಿಕಲ್ ಫಿಸಿಕ್ಸ್, ವಸ್ತು ವಿಜ್ಞಾನ, ಇಲೆಕ್ಟ್ರಾನಿಕ್ಸ್, ಗಣಿತಶಾಸ್ತ್ರ, ಕನ್ನಡ, ತುಳು, ಹಿಂದಿ, ಇಂಗ್ಲೀಷ್, ಕೊಂಕಣಿ, ರಸಾಯನಶಾಸ್ತ್ರ, ಕೈಗಾರಿಕಾ ರಸಾಯನಶಾಸ್ತ್ರ, ಜೀವರಸಾಯನ ಶಾಸ್ತ್ರ, ಸಂಖ್ಯಾಶಾಸ್ತ್ರ, ಯೋಗ ವಿಜ್ಞಾನ, ಆನ್ವಯಿಕ ಸಸ್ಯಶಾಸ್ತ್ರ, ಅನ್ವಯಿಕ ಪ್ರಾಣಿಶಾಸ್ತ್ರ, ಜೀವ ವಿಜ್ಞಾನ, ಬಯೋಟೆಕ್ನಾಲಜಿ, ಸೂಕ್ಷ್ಮಾಣುಜೀವವಿಜ್ಞಾನ (Microbiology), ಫುಡ್ ಸಾಯನ್ಸ್‍ ಆ್ಯಂಡ್ ನ್ಯೂಟ್ರೀಷನ್, ಪರಿಸರ ವಿಜ್ಞಾನ (Environmental Science), ಜಿಯೋಇನ್ಫಾರ್ಮೆಟಿಕ್ಸ್ (Geo Informatics), ಭೂಗೋಳಶಾಸ್ತ್ರ, ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ (Library And Information Science), ಗಣಕ ವಿಜ್ಞಾನ,ವಾಣಿಜ್ಯ ಶಾಸ್ತ್ರ ಮತ್ತು ಮ್ಯಾನೆಜ್‍ಮೆಂಟ್/ MHRD,ವ್ಯವಹಾರ ಆಡಳಿತ (MBA), ಪ್ರವಾಸೋದ್ಯಮ ಆಡಳಿತ ((MTA/TTM), ವ್ಯವಹಾರ ಆಡಳಿತ (MBA (IB)).

ಪದವಿ ವಿಷಯಗಳು:- ಅರ್ಥಶಾಸ್ತ್ರ, ಇತಿಹಾಸ, ರಾಜ್ಯಶಾಸ್ತ್ರ, ಜರ್ನಲಿಸಮ್, ಸಮಾಜಶಾಸ್ತ್ರ, ಸಮಾಜಕಾರ್ಯ, ದೈಹಿಕ ಶಿಕ್ಷಣ, ಕನ್ನಡ, ಇಂಗ್ಲೀಷ್, ಹಿಂದಿ, ಸಂಸ್ಕøತ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಗಣಕ ವಿಜ್ಞಾನ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಸೂಕ್ಷ್ಮಾಣು ಜೀವವಿಜ್ಞಾನ (Microbiology), ಭೂಗೋಳಶಾಸ್ತ್ರ, ವಾಣಿಜ್ಯ ಶಾಸ್ತ್ರ ಮತ್ತು ಮ್ಯಾನೆಜ್‍ಮೆಂಟ್/ HRD/ Tourism and Travel Management.
ಯು.ಜಿ.ಸಿ. ಎನ್.ಇ.ಟಿ./ಎಸ್.ಎಲ್.ಇ.ಟಿ. ಉತ್ತೀರ್ಣತೆ/ಎಂ.ಫಿಲ್/ಪಿ.ಹೆಚ್.ಡಿ. ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಇ-ಮೇಲ್ ವಿಳಾಸ ಮತ್ತು ದೂರವಾಣಿ/ ಮೊಬೈಲ್ ಸಂಖ್ಯೆಯನ್ನು ಅರ್ಜಿಯಲ್ಲಿ ಕಡ್ಡಾಯವಾಗಿ ನಮೂದಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ವಿಶ್ವವಿದ್ಯಾನಿಲಯದ ಆವರಣ, ಸ್ನಾತಕೋತ್ತರ ಕೇಂದ್ರ, ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಆನ್‍ಲೈನ್ ಸಂದರ್ಶನದ ದಿನಾಂಕಗಳನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್ ತಿತಿತಿ.mಚಿಟಿgಚಿಟoಡಿeuಟಿiveಡಿsiಣಥಿ.ಚಿಛಿ.iಟಿ ನಲ್ಲಿ ಪ್ರಕಟಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ; 0824-2287276 ಸಂಪರ್ಕಿಸಬಹುದು ಎಂದು ಮಂಗಳೂರು ವಿ.ವಿ ಕುಲಸಚಿವರ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top