(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.03: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 270 ಹೊಸ ಕೋವಿಡ್ ಪ್ರಕರಣಗಳು ಸೋಮವಾರ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 12,713ಕ್ಕೇ ಏರಿಕೆಯಾಗಿದೆ.ಜಿಲ್ಲೆಯ ವೆಲ್ ಲಾಕ್ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಪ್ಲಾಸ್ಮಾ ಥೆರಪಿಯನ್ನು ಆರಂಭಿಸಲಾಗುತ್ತದೆ ಎಂದು ಜಿಲ್ಲಾಡಳಿತ ಹೇಳಿದೆ.
ಜಿಲ್ಲೆಯಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,556.ಪ್ಲಾಸ್ಮಾ ಥೆರಪಿ ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ. ವಿ. ಮಾಹಿತಿ ನೀಡಿದ್ದಾರೆ. “ಪ್ಲಾಸ್ಮಾ ಥೆರಪಿ ಆರಂಭಿಸಲು ಈಗಾಗಲೇ ಕಟ್ಟಡವನ್ನು ಗುರುತಿಸಲಾಗಿದೆ. ಇದಕ್ಕಾಗಿ ಯಂತ್ರವನ್ನು ಖರೀದಿ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.”ಪ್ಲಾಸ್ಮಾ ಥೆರಪಿಗೆ ಒಪ್ಪಿಗೆ ನೀಡುವಂತೆ ಈಗಾಗಲೇ ಮನವಿ ಸಲ್ಲಿಸಲಾಗಿದೆ. ಯಂತ್ರಗಳನ್ನು ಖರೀದಿ ಮಾಡಿ ಜೋಡಣೆ ಮಾಡಲಾಗುತ್ತದೆ. ಬಳಿಕ ಲೈಸೆನ್ಸ್ ನೀಡುವ ಮೊದಲು ಅವುಗಳನ್ನು ಪರಿಶೀಲನೆ ಮಾಡಲಾಗುತ್ತದೆ” ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.