ಸೆ.7ರಿಂದ ಪ್ರವಾಸಿಗರಿಗೆ ಮುಕ್ತವಾದ ನಂದಿಗಿರಿಧಾಮ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಸೆ. 03. ಸೆಪ್ಟೆಂಬರ್‌ 7ರಿಂದ ನಂದಿಗಿರಿಧಾಮವು ಪ್ರವಾಸಿಗರಿಗೆ ಪ್ರವೇಶಕ್ಕೆ ಮುಕ್ತವಾಗಲಿದೆ. ಸೆಪ್ಟೆಂಬರ್‌ 7ರಿಂದ ಪ್ರತಿದಿನ ಬೆಳಗ್ಗೆ 8ರಿಂದ 5 ರವರೆಗೆ ಮಾತ್ರ ಪ್ರವಾಸಿಗರಿಗೆ ನಂದಿಗಿರಿಧಾಮದ ಪ್ರವೇಶಕ್ಕೆ ಅನುಮತಿಯನ್ನು ನೀಡಲಾಗಿದೆ.

ಕೊರೋನಾ ಹಿನ್ನೆಲೆಯಿಂದ ವಿಶ್ವವಿಖ್ಯಾತಿಯಾದ ನಂದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಯನ್ನು ನಿಷೇಧಿಸಲಾಗಿತ್ತು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಅನ್‌‌ಲಾಕ್‌ 4.0 ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ನಂದಿಗಿರಿಧಾಮದ ಪ್ರವೇಶಕ್ಕೆ ಹೇರಲಾಗಿದ್ದ ನಿಷೇಧವನ್ನು ತೆರವುಮಾಡಲಾಗಿದೆ.

error: Content is protected !!
Scroll to Top