ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ‘ಪೋಲಿ’ಸ್ ನಿಂದ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.03:  ರಕ್ಷಣೆ ಕೊಡಬೇಕಾದ ಪೊಲೀಸಪ್ಪ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ  ಪೊಲೀಸ್ ಹುದ್ದೆಗೆ ಕಳಂಕ ತಂದಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಮೇ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಪೊಲೀಸ್ ಜೊತೆಗೆ ಸೇರಿ ಬೆಂಗಳೂರಿನ ಮತ್ತೊಬ್ಬ ವ್ಯಕ್ತಿ ಬೆದರಿಕೆ ಹಾಕಿದ್ದು ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಇವತ್ತು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ.

Also Read  ಮಂಗಳೂರು: ಶ್ರೀ ದೇವಿ ಫಾರ್ಮಸಿ ಕಾಲೇಜಿಗೆ ಚಿನ್ನದ ಪದಕ ಮತ್ತು ಹಲವು ರ್ಯಾಂಕ್

error: Content is protected !!
Scroll to Top