ಬೆಂಗಳೂರು: ಅಕ್ರಮ ವಜ್ರ ಸಾಗಾಟ ➤ಕಡಬದ ವ್ಯಕ್ತಿಯ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03: ವಜ್ರ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕಡಬ ತಾಲೂಕಿನ ವ್ಯಕ್ತಿಯ ಸಹಿತ ಮೂವರನ್ನು ಬೆಂಗಳೂರು ಸಿಟಿ ಬಳಿ ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ.

 

ಆರೋಪಿಗಳನ್ನು ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ರವಿ ಕುಮಾರ್(54ವ), ಕಡಬ ತಾಲೂಕಿನ ಬೆಳಂದೂರು ಗ್ರಾಮದ ಸುಧೀರ್(28ವ) ಹಾಗೂ ಬೆಳ್ತಂಗಡಿ ತಾಲೂಕಿನ ಅರಂಬೋಡಿ ಗ್ರಾಮದ ಪ್ರವೀಣ್‌ ಕುಮಾರ್ (51ವ.) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 9 ವಜ್ರದ ಹರಳುಗಳು ಮತ್ತು ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಗಳನ್ನು ಇನ್ಸ್‌ಪೆಕ್ಟರ್‌ ಕುಮಾರಸ್ವಾಮಿ ಮತ್ತವರ ಸಿಬ್ಬಂದಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರು ಯುವತಿಯರ ಶವ ಪತ್ತೆ - ಅತ್ಯಾಚಾರ ಶಂಕೆ..!

 

error: Content is protected !!
Scroll to Top